Tuesday, May 19, 2026
Google search engine
Homeಕ್ರೀಡೆಇಂಡಿಯಾ ಮೈತ್ರಿಕೂಟದ ಬಗ್ಗೆ ಶೇ.65 ಭಾರತೀಯರ ಒಲವು: ಸಿವೋಟರ್ಸ್ ಸಮೀಕ್ಷೆ

ಇಂಡಿಯಾ ಮೈತ್ರಿಕೂಟದ ಬಗ್ಗೆ ಶೇ.65 ಭಾರತೀಯರ ಒಲವು: ಸಿವೋಟರ್ಸ್ ಸಮೀಕ್ಷೆ

ಇತ್ತೀಚಿನ ಚುನಾವಣೆಗಳಲ್ಲಿ ಸೋಲುಂಡರೂ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟ ಮುಂದುವರಿಯಬೇಕು ಎಂದು ಶೇ.65 ಭಾರತೀಯರು ಅಭಿಪ್ರಾಯಪಟ್ಟಿದ್ದಾರೆ.

ಸಿವೋಟರ್ಸ್-ಇಂಡಿಯಾ ಟುಡೆ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಸಮೀಕ್ಷೆ ಪ್ರಕಾರ ಶೇ.26ರಷ್ಟು ಭಾರತೀಯರು ಅಸ್ಪಷ್ಟ ಉತ್ತರ ಹಾಗೂ ಇಂಡಿಯಾ ಮೈತ್ರಿಕೂಟ ವಿಸರ್ಜಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜನವರಿ 2ರಿಂದ ಫೆಬ್ರವರಿ 9ರವರೆಗೆ ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ 1,25,123 ಮತದಾರರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ.

ಇಂಡಿಯಾ ಮೈತ್ರಿಕೂಟದ ನೇತೃತ್ವ ಯಾರು ವಹಿಸಬೇಕು ಎಂಬ ಪ್ರಶ್ನೆಗೆ ಶೇ.24ರಷ್ಟು ಮಂದಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಿದ್ದಾರೆ. ಶೇ.14ರಷ್ಟು ಮಂದಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರ ಹೆಸರನ್ನು ಉಲ್ಲೇಖಿಸಿದ್ದಾರೆ.

ಇದೇ ಸಂಸ್ಥೆ 2024ರ ಲೋಕಸಭಾ ಚುನಾವಣೆಯಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಇಂಡಿಯಾ ಮೈತ್ರಿಕೂಟ 232 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿತ್ತು. ಒಂದು ವೇಳೆ ಈಗ ಚುನಾವಣೆ ನಡೆಸಿದರೆ 188 ಸ್ಥಾನಗಳಿಗೆ ಕುಸಿಯಲಿದೆ ಎಂದು ಕೂಡ ಹೇಳಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments