Wednesday, October 23, 2024
Google search engine
Homeತಾಜಾ ಸುದ್ದಿಬೆಂಗಳೂರಿನಲ್ಲಿ ಭಾರೀ ಮಳೆ: ಇನ್ನೂ 3 ದಿನ ಮಳೆ ಸಾಧ್ಯತೆ!

ಬೆಂಗಳೂರಿನಲ್ಲಿ ಭಾರೀ ಮಳೆ: ಇನ್ನೂ 3 ದಿನ ಮಳೆ ಸಾಧ್ಯತೆ!

ರಾಜಧಾನಿ ಬೆಂಗಳೂರಿನಲ್ಲಿ 6 ತಿಂಗಳ ನಂತರ ಕಳೆದೆರಡು ದಿನಗಳಲ್ಲಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಪ್ರಕಾರ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಗುರುವಾರ ಕೆಲವು ಕಡೆ ಮಳೆಯಾಗಿತ್ತು. ಆದರೆ ಶುಕ್ರವಾರ ನಗರದೆಲ್ಲೆಡೆ ಸುಮಾರು ಒಂದು ಗಂಟೆ ಕಾಲ ಭಾರೀ ಮಳೆಯಾಗಿದೆ. ಇದರಿಂದ ಬಿಸಿಗಾಳಿಯಿಂದ ತತ್ತರಿಸಿದ ಜನರು ಸಮಾಧಾನ ನಿಟ್ಟುಸಿರುಬಿಟ್ಟಿದ್ದಾರೆ.

ಕೆಜಿಎಫ್, ಕೋಲಾರ, ಹೊಸಕೋಟೆ, ಬೆಂಗಳೂರು ಹಾಗೂ ಮೈಸೂರಿನಲ್ಲಿ ಉತ್ತಮ ಮಳೆಯಾಗಿದೆ. ಬೆಂಗಳೂರಿನಲ್ಲಿ ಸುಮಾರು 5 ಮಿ.ಮೀ. ಮಳೆಯಾಗಿದೆ ಎಂದು ಹೇಳಲಾಗಿದೆ.

ಹವಾಮಾನ ಇಲಾಖೆ ಪ್ರಕಾರ ಬೆಂಗಳೂರಿನಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಎರಡು ದಿನ ಮಳೆಯಾಗಿದ್ದರಿಂದ 40 ಡಿಗ್ರಿ ಸೆಲ್ಸಿಯಸ್ ಇದ್ದ ಉಷ್ಣಾಂಶ 35ರಿಂದ 37 ಡಿಗ್ರಿಗೆ ಇಳಿಯಲಿದೆ. ಇನ್ನು ಕೆಲವು ದಿನ ಮಳೆಯಾದರೆ 30ರ ಆಸುಪಾಸಿಗೆ ಇಳಿಯಬಹುದು ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments