Sunday, June 28, 2026
Google search engine
Homeರಾಜ್ಯಮಾರ್ಚ್ 3ರಿಂದ ಅಧಿವೇಶನ, ಮಾರ್ಚ್ 7ರಂದು ಬಜೆಟ್ ಮಂಡನೆ: ಸಿಎಂ ಘೋಷಣೆ

ಮಾರ್ಚ್ 3ರಿಂದ ಅಧಿವೇಶನ, ಮಾರ್ಚ್ 7ರಂದು ಬಜೆಟ್ ಮಂಡನೆ: ಸಿಎಂ ಘೋಷಣೆ

ಮಾರ್ಚ್ 3ರಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್‌ 7ರಂದು 2025-26ನೇ ಸಾಲಿನ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಬೆಂಗಳೂರಿನಲ್ಲಿ ಸೋಮವಾರ ರೈತ ಮುಖಂಡರ ಜೊತೆ ಬಜೆಟ್ ಪೂರ್ವ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಮಂಡನೆ ದಿನಾಂಕವನ್ನು ಪ್ರಕಟಿಸಿದರು.

ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಅಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾರ್ಚ್​ 7ರಂದು ಬಜೆಟ್ ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ಅವರು ತಿಳಿಸಿದರು.

ಅತಿ ಹೆಚ್ಚು ಉದ್ಯೋಗ ಅವಲಂಬಿಸಿರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆದ್ಯತೆ ನೀಡುತ್ತಾ ಬಂದಿದ್ದು, ಕಾಲಕಾಲಕ್ಕೆ ಅವರ ಬೇಡಿಕೆಗಳನ್ನು ಈಡೇರಿಸುತ್ತಾ ಬಂದಿದ್ದೇವೆ ಎಂದು ಅವರು ಹೇಳಿದರು.

ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಗಳ ಬಲವಂತದ ವಸೂಲಿಗೆ ಕಡಿವಾಣ ಹಾಕಿದ್ದಕ್ಕಾಗಿ ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರವನ್ನು ಒಕ್ಕೋರಲಿನಿಂದ ಅಭಿನಂಧಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments