Thursday, December 25, 2025
Google search engine
Homeದೇಶಕುಂಭಮೇಳದಲ್ಲಿ ಮಹಿಳೆಯರ ಸ್ನಾನದ ವೀಡಿಯೋ: ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದರೆ ಹುಷಾರ್!

ಕುಂಭಮೇಳದಲ್ಲಿ ಮಹಿಳೆಯರ ಸ್ನಾನದ ವೀಡಿಯೋ: ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದರೆ ಹುಷಾರ್!

ಪ್ರಯಾಗರಾಜ್: ಕುಂಭಮೇಳದಲ್ಲಿ ಮಹಿಳಾ ಯಾತ್ರಾರ್ಥಿಗಳ ಸ್ನಾನದ ಆಕ್ಷೇಪಾರ್ಹ ವೀಡಿಯೊಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಎರಡು ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಉಪ್ರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಹಾ ಕುಂಭಮೇಳಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ದಾರಿತಪ್ಪಿಸುವ ಮತ್ತು ಆಕ್ಷೇಪಾರ್ಹ ಕಂಟೆಂಟ್ ಪೋಸ್ಟ್ ಮಾಡುವುದನ್ನು ತಡೆಗಟ್ಟುವ ಪ್ರಯತ್ನಗಳ ಭಾಗವಾಗಿ ಉತ್ತರ ಪ್ರದೇಶ ಪೊಲೀಸ್ ಮುಖ್ಯಸ್ಥ ಪ್ರಶಾಂತ್ ಕುಮಾರ್ ಅವರ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಕೆಲವೊಂದು ಸಾಮಾಜಿಕ ಮಾಧ್ಯಮ ಜಾಲತಾಣಗಳಲ್ಲಿ ಜನತೆಯ ಗೌಪ್ಯತೆ ಮತ್ತು ಘನತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿ, ಕುಂಭಮೇಳದಲ್ಲಿ ಮಹಿಳೆಯರು ಸ್ನಾನ ಮಾಡುವ ಮತ್ತು ಬಟ್ಟೆ ಬದಲಾಯಿಸುವ ವೀಡಿಯೊಗಳನ್ನು ಅಪ್ಲೋಡ್ ಮಾಡುತ್ತಿರುವುದನ್ನು ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ತಂಡ ಪತ್ತೆ ಮಾಡಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಹಿಳಾ ಯಾತ್ರಾರ್ಥಿಗಳ ಆಕ್ಷೇಪಾರ್ಹ ವೀಡಿಯೊಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಫೆಬ್ರವರಿ 17ರಂದು ಇನ್ಸ್ಟಾಗ್ರಾಮ್ ಖಾತೆ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈ ಖಾತೆ ಯಾರಿಗೆ ಸೇರಿದೆ ಎಂಬ ಬಗ್ಗೆ ಮಾಹಿತಿ ನೀಡುವಂತೆ ಇನ್ ಸ್ಟಾಗ್ರಾಮ್ನ ಒಡೆತನ ಹೊಂದಿರುವ ತಂತ್ರಜ್ಞಾನ ಸಂಸ್ಥೆ ಮೆಟಾಗೆ ಕೋರಲಾಗಿದೆ ಮತ್ತು ವಿವರಗಳು ಬಂದ ನಂತರ ಬಂಧನ ಸೇರಿದಂತೆ ಇತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಫೆಬ್ರವರಿ 19ರಂದು ದಾಖಲಾದ ಎರಡನೇ ಪ್ರಕರಣದಲ್ಲಿ, ಟೆಲಿಗ್ರಾಮ್ ಚಾನೆಲ್ ಒಂದರಲ್ಲಿ ಇದೇ ರೀತಿಯ ವೀಡಿಯೊಗಳನ್ನು ಮಾರಾಟಕ್ಕೆ ಇಟ್ಟಿರುವುದು ಕಂಡುಬಂದಿದೆ. ಚಾನೆಲ್ ವಿರುದ್ಧ ಕಾನೂನು ಕ್ರಮಗಳನ್ನು ಪ್ರಾರಂಭಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮಹಾ ಕುಂಭಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ವಿಷಯ ಅಥವಾ ತಪ್ಪು ಮಾಹಿತಿಯನ್ನು ಹರಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments