Thursday, December 25, 2025
Google search engine
Homeಕ್ರೀಡೆಮುರಿದುಬಿದ್ದ ಕ್ರಿಕೆಟಿಗ ಯಜುರ್ವೆಂದ್ರ ಚಾಹಲ್- ನಟಿ ಧನಶ್ರೀ 4 ವರ್ಷದ ದಾಂಪತ್ಯ!

ಮುರಿದುಬಿದ್ದ ಕ್ರಿಕೆಟಿಗ ಯಜುರ್ವೆಂದ್ರ ಚಾಹಲ್- ನಟಿ ಧನಶ್ರೀ 4 ವರ್ಷದ ದಾಂಪತ್ಯ!

ಸ್ಪಿನ್ನರ್ ಯಜುರ್ವೆಂದ್ರ ಚಾಹಲ್ ಮತ್ತು ಕೋರಿಯೋಗ್ರಾಫರ್ ಧನಶ್ರೀ ಅಧಿಕೃತವಾಗಿ ಡಿವೋರ್ಸ್ ಪಡೆಯುವ ಮೂಲಕ 4 ವರ್ಷಗಳ ದಾಂಪತ್ಯ ಜೀವನ ಮುರಿದುಬಿದ್ದಿದೆ.

ಫೆಬ್ರವರಿ 20ರಂದು ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ದಂಪತಿಗೆ ವಿಚ್ಛೇದನ ಪ್ರಕ್ರಿಯೆ ಪೂರ್ಣಗೊಂಡಿದೆ. ಸುಮಾರು 45 ನಿಮಿಷಗಳ ಕಾಲ ನಡೆದ ಕೌನ್ಸಿಲಿಂಗ್ ನಲ್ಲಿ ಇಬ್ಬರು ಪರಸ್ಪರ ಡಿವೋರ್ಸ್ ಗೆ ಒಪ್ಪಿಗೆ ಸೂಚಿಸಿದ್ದಾರೆ. ಈ ಮೂಲಕ ಸಹಮತದೊಂದಿಗೆ ದಾಂಪತ್ಯ ಜೀವನಕ್ಕೆ ತೆರೆ ಎಳೆದಿದ್ದಾರೆ.

ಹೊಂದಾಣಿಕೆ ಸಮಸ್ಯೆ ಕಾರಣ ಇಬ್ಬರು ಪರಸ್ಪರ ದೂರವಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಸಂಜೆ 4.30ರ ಸುಮಾರಿಗೆ ನ್ಯಾಯಾಧೀಶರು ಡಿವೋರ್ಸ್ ಘೋಷಿಸಿದ್ದಾರೆ.

ಭಾರತ ತಂಡ ಮತ್ತು ಐಪಿಎಲ್ ನಲ್ಲಿ ಪ್ರಮುಖ ಬೌಲರ್ ಆಗಿರುವ ಯಜುರ್ವೆಂದ್ರ ಚಾಹಲ್ ಮತ್ತು ನೃತ್ಯ ಸಂಯೋಜಕಿ ಧನಶ್ರೀ ಡಿವೋರ್ಸ್ ಪಡೆಯಲಿದ್ದಾರೆ ಎಂಬ ವದಂತಿ ಹಲವು ದಿನಗಳಿಂದ ಹರಿದಾಡುತ್ತಿತ್ತು. ಆದರೆ ಈ ಬಗ್ಗೆ ಇಬ್ಬರೂ ವೈಯಕ್ತಿಕ ವಿಷಯವಾಗಿದೆ ಎಂದು ಗುಟ್ಟು ಬಿಟ್ಟುಕೊಟ್ಟಿರಲಿಲ್ಲ.

ಡಿವೋರ್ಸ್ ಪಡೆದ ಬೆನ್ನಲ್ಲೇ ಇನ್ಸ್ಟಾದಲ್ಲಿ ಚಹಲ್ ದೇವರು ನನ್ನನ್ನು ಎಷ್ಟೋ ಬಾರಿ ಕಾಪಾಡಿದ್ದಾನೆ. ನಾನು ಅವುಗಳನ್ನು ಸಂಖ್ಯೆಯಲ್ಲಿ ಎಣಿಸಲು ಸಹ ಸಾಧ್ಯವಿಲ್ಲ. ಕೆಲವೊಮ್ಮೆ ದೇವರು ನನ್ನ ಅರಿವಿಗೆ ಬಾರದೆಯೋ ನನ್ನ ಜೊತೆ ನಿಂತಿದ್ದಾನೆ. ನನಗೆ ತಿಳಿಯದೇ ನನ್ನನ್ನು ಬೆಂಬಲಿಸಿದ್ದಕ್ಕಾಗಿ ದೇವರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಧನಶ್ರೀ ಒತ್ತಡದಿಂದ ಅದೃಷ್ಟಶಾಲಿಯಾಗುವವರೆಗೆ. ದೇವರು ನಮ್ಮ ಒತ್ತಡವನ್ನು ಸಂತೋಷವಾಗಿ ಪರಿವರ್ತಿಸುವ ರೀತಿ ಎಷ್ಟು ಅದ್ಭುತವಾಗಿದೆ? ಇಂದು ನೀವು ಯಾವುದಾದರೂ ವಿಷಯದ ಬಗ್ಗೆ ಒತ್ತಡಕ್ಕೆ ಒಳಗಾದರೆ ಹೆಚ್ಚು ಯೋಚಿಸುತ್ತಿದ್ದರೆ, ನಿಮಗೆ ಒಂದು ಆಯ್ಕೆ ಇದೆ ಎಂಬುದನ್ನು ನೆನಪಿಡಿ. ನೀವು ಆ ಉದ್ವೇಗವನ್ನು ತೆಗೆದುಕೊಳ್ಳಬಹುದು ಅಥವಾ ನಿಮ್ಮ ಎಲ್ಲಾ ಚಿಂತೆಗಳನ್ನು ದೇವರಿಗೆ ಅರ್ಪಿಸಿ ಎಲ್ಲದಕ್ಕೂ ಪ್ರಾರ್ಥಿಸಬಹುದು.ದೇವರು ನಿಮ್ಮ ಒಳಿತಿಗಾಗಿ ಎಲ್ಲವನ್ನೂ ಮಾಡಬಹುದು ಎಂದು ನಂಬುವುದರಲ್ಲಿ ಬೇರೆಯದೇ ರೀತಿಯ ಶಕ್ತಿಯಿದೆ ಎಂಬುದಾಗಿ ಬರೆದುಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments