Thursday, December 25, 2025
Google search engine
Homeಬೆಂಗಳೂರುಮಾನನಷ್ಟ ಮೊಕದ್ದಮೆ: ರೋಹಿಣಿ ಸಿಂಧೂರಿಗೆ ಬಿಗ್ ರಿಲೀಫ್: ಡಿ.ರೂಪಾಗೆ ಹಿನ್ನಡೆ!

ಮಾನನಷ್ಟ ಮೊಕದ್ದಮೆ: ರೋಹಿಣಿ ಸಿಂಧೂರಿಗೆ ಬಿಗ್ ರಿಲೀಫ್: ಡಿ.ರೂಪಾಗೆ ಹಿನ್ನಡೆ!

ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ದಾಖಲಿಸಿದ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡುವ ಮೂಲಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ದೊರೆತಿದೆ.

ಮಾರ್ಚ್ 12 ರವರೆಗೆ ವಿಚಾರಣೆಯನ್ನು ಮುಂದೂಡಿರುವ ಹೈಕೋರ್ಟ್, ವಿಚಾರಣಾ ಸಂದರ್ಭದಲ್ಲಿ ಇಬ್ಬರು ಮಹಿಳಾ ಅಧಿಕಾರಿಗಳ ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ನ್ಯಾ.ಮೊಹಮ್ಮದ್ ನವಾಜ್ ಸಲಹೆ ನೀಡಿದ್ದಾರೆ.

ಬೆಂಗಳೂರಿನ 7 ನೇ ಎಸಿಎಂಎಂ ಕೋರ್ಟ್ಗೆ ರೂಪಾ ಖಾಸಗಿ ದೂರು ಸಲ್ಲಿಸಿದ್ದರು. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಕೋರ್ಟ್ ನೋಟಿಸ್ ನೀಡಿತ್ತು. 2023ರ ಫೆ.19 ರಂದು ರೋಹಿಣಿ ಸಿಂಧೂರಿ ಮಾಧ್ಯಮ ಹೇಳಿಕೆ ನೀಡಿದ್ದಾರೆ. ನಂತರ ಅದನ್ನು ಎಕ್ಸ್ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಈ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದಾರೆ. ಈ ಹೇಳಿಕೆಯನ್ನು 1.8 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ. ರೋಹಿಣಿ ಸಿಂಧೂರಿ ಅವರ ಅವಹೇಳನಕಾರಿ ಹೇಳಿಕೆ ನಂತರ ತಮ್ಮ ವರ್ಗಾವಣೆಯಾಗಿದೆ.

6 ತಿಂಗಳ ವರೆಗೆ ಸಂಬಳ ನೀಡದೇ ಹುದ್ದೆ ಇಲ್ಲದೇ ವರ್ಗಾಯಿಸಿದ್ದರು. ಈ ಹೇಳಿಕೆಯಿಂದ ನನ್ನ ತಂಗಿ, ಪತಿ, ಮಕ್ಕಳೂ ಮಾನಸಿಕ ಯಾತನೆ ಅನುಭವಿಸಿದ್ದಾರೆ ಎಂದು ರೋಹಿಣಿ ವಿರುದ್ಧ ರೂಪಾ ಮಾನನಷ್ಟ ಮೊಕದ್ದಮೆ ಹೂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments