Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ಕ್ರೀಡೆ

ಚಾಂಪಿಯನ್ಸ್ ಟ್ರೋಫಿ ಫೈನಲ್ ಇಂದು: ಅಜೇಯ ಭಾರತಕ್ಕೆ ವಿಜಯ?

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 26 ವೀಕ್ಷಣೆಗಳು

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಭಾನುವಾರ ನಡೆಯುವ ಹೈವೋಲ್ಟೇಜ್ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ.
ದುಬೈನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದ ಎರಡೂ ತಂಡಗಳು ಮತ್ತೊಮ್ಮೆ ಮುಖಾಮುಖಿ ಆಗುತ್ತಿವೆ. ಲೀಗ್ ನಲ್ಲಿ ನ್ಯೂಜಿಲೆಂಡ್ ಮಣಿಸಿದ ಆತ್ಮವಿಶ್ವಾಸದಲ್ಲಿ ಭಾರತ ತಂಡ ಇದ್ದರೆ, ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಕಿವೀಸ್ ಪಡೆ ಇದೆ.
ಸಂಘಟಿತ ಪ್ರದರ್ಶನದಿಂದ ಸೋಲರಿಯದ ತಂಡವಾಗಿ ಮುನ್ನುಗ್ಗುತ್ತಿರುವ ಭಾರತ ತಂಡ ೨೫ ವರ್ಷಗಳ ನಂತರ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದೆ. ಸ್ಪಿನ್ನರ್ ಗಳು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದರೆ, ಬ್ಯಾಟ್ಸ್ ಮನ್ ಗಳು ಹೊಸ ಪಿಚ್ ನಲ್ಲಿ ಜವಾಬ್ದಾರಿಯುತ ಪ್ರದರ್ಶನ ನೀಡುತ್ತಿದ್ದಾರೆ.
ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡುವ ನಿರೀಕ್ಷೆ ಇದ್ದು, ಮೊಹಮದ್ ಶಮಿ ಬದಲು ಅರ್ಷದೀಪ್ ಸಿಂಗ್ ಆಡಬಹುದು. ಉಳಿದಂತೆ ಸ್ಪಿನ್ನರ್ ಗಳು ತಂಡದಲ್ಲಿ ಉಳಿದುಕೊಳ್ಳಲಿದ್ದಾರೆ. ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ ಮಂಡಿ ನೋವಿಗೆ ಒಳಗಾಗಿದ್ದು ತಂಡದಲ್ಲಿ ಸ್ವಲ್ಪ ಮಟ್ಟಿಗೆ ಆತಂಕ ಉಂಟು ಮಾಡಿದೆ. 6ನೇ ಕ್ರಮಾಂಕದಲ್ಲಿ ಮಿಂಚುತ್ತಿರುವ ಕೆಎಲ್ ರಾಹುಲ್ ೫ನೇ ಕ್ರಮಾಂಕದಲ್ಲಿ ಆಡಿಸಲಾಗುವುದೇ ಎಂಬ ಅನುಮಾನ ಕಾಡುತ್ತಿದೆ.
ಮತ್ತೊಂದೆಡೆ ನ್ಯೂಜಿಲೆಂಡ್ ಕೂಡ ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ್ದು, ಭಾರತ ವಿರುದ್ಧ ಮಾತ್ರ ಏಕಮಾತ್ರ ಸೋಲುಂಡಿದೆ. ತಂಡದಲ್ಲಿ ಕೇನ್ ವಿಲಿಯಮ್ಸ್, ಡುಕೆಟ್ ಸೇರಿದಂತೆ ಬ್ಯಾಟ್ಸ್ ಮನ್ ಗಳು ಉತ್ತಮ ಪ್ರದರ್ಶನ ನೀಡುತ್ತಿದ್ದು, 6 ಎಡಗೈ ಬ್ಯಾಟ್ಸ್ ಮನ್ ಗಳು ಇರುವುದು ತಂಡದ ಬಲವಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment