ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ನ್ಯಾಯಾಲಯ 7 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಕೆಆರ್ ನಗರದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ 17ನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದೆ.
ಎಸ್ ಐಟಿ ಕಸ್ಟಡಿ ವೇಳೆ ರೇವಣ್ಣ ಪ್ರಕರಣದ ಕುರಿತು ಯಾವುದೇ ಹೇಳಿಕೆ ನೀಡಿಲ್ಲ. ಅಲ್ಲದೇ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಎಸ್ ಐಟಿ ಪರ ವಕೀಲ ಜಗದೀಶ್ ವಾದ ಮಂಡಿಸಿದರು.
ಇದೇ ವೇಳೆ ನನಗೆ ಮೂರು ದಿನ ನಿದ್ದೆ ಮಾಡಲು ಬಿಡದೇ ವಿಚಾರಣೆ ಮಾಡುತ್ತಿದ್ದಾರೆ. ನಾನು ತಂದೆ ದೇವೇಗೌಡರ ಮನೆಯಲ್ಲಿ ಇದ್ದಾಗ ಏಕಾಏಕಿ ಬಂಧಿಸಿದ್ದಾರೆ. ನನಗೆ ಅಪರಹಣ ಪ್ರಕರಣದ ಬಗ್ಗೆ ಏನೂ ಗೊತ್ತಿಲ್ಲ. ಗೊತ್ತಿದ್ದಷ್ಟು ಉತ್ತರ ನೀಡಿದ್ದೇನೆ ಎಂದು ಎಚ್.ಡಿ. ರೇವಣ್ಣ ಮನವಿ ಮಾಡಿದರು.
ರೇವಣ್ಣ ಮನವಿ ತಿರಸ್ಕರಿಸಿದ ನ್ಯಾಯಾಲಯ 7 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಅಲ್ಲದೇ ಜಾಮೀನು ನೀಡಿದರೆ ಸಾಕ್ಷ್ಯ ನಾಶ ಮತ್ತು ಒತ್ತಡ ಹೇರುವ ಸಾಧ್ಯತೆ ಇದೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟರು.