Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್
ಅಪರಾಧ

ಬಿಜೆಪಿ ನಾಯಕನ ಗುಂಡಿಗೆ ಇಬ್ಬರು ಮಕ್ಕಳು ಬಲಿ, ಪತ್ನಿ, ಮಗನ ಸ್ಥಿತಿ ಗಂಭೀರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 26 ವೀಕ್ಷಣೆಗಳು
yogesh rohilla

ಬಿಜೆಪಿ ನಾಯಕ ಪತ್ನಿ ಹಾಗೂ ಮೂವರು ಮಕ್ಕಳ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರು ಮಕ್ಕಳು ಮೃತಪಟ್ಟು, ಮತ್ತೊಬ್ಬ ಮಗ ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಸಹಾರನ್​ಪುರದ ಗಂಗೋ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ನಾಯಕ ಯೋಗೇಶ್ ರೋಹಿಲ್ಲಾ ಈ ಕೃತ್ಯ ಎಸಗಿದ್ದು, ಪೊಲೀಸರು ಯೋಗೇಶ್ ನನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ಪಿಸ್ತೂಲ್ ವಶಪಡಿಸಿಕೊಂಡಿದ್ದಾರೆ.

ಪತ್ನಿ ಶೀಲ ಶಂಕಿಸಿದ್ದ ಯೋಗೇಶ್​ ನಿತ್ಯ ಜಗಳವಾಡುತ್ತಿದ್ದ. ಆತ ಕೆಲವು ದಿನಗಳಿಂದ ತೀವ್ರ ಮಾನಸಿಕ ಒತ್ತಡದಲ್ಲಿದ್ದ ಎಂದೂ ಹೇಳಲಾಗಿದೆ, ನೆರೆಹೊರೆಯವರೊಂದಿಗೆ ಬೇರೆಯವರೊಂದಿಗೆ ತಮ್ಮ ಸ್ಥಿತಿ ಬಗ್ಗೆ ಹೇಳಿಕೊಂಡಿರಲಿಲ್ಲ. ವಿಧಿವಿಜ್ಞಾನ ತಂಡದ ಜೊತೆ ಪೊಲೀಸ್ ಅಧಿಕಾರಿ ಗಳು ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಕೃತ್ಯ ಎಸಗಿದ ಬಳಿಕ ಆರೋಪಿ ಯೋಗೀಶ್ ಸ್ವತಃ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ, ನಿಖರ ಕಾರಣವನ್ನು ಪೊಲೀಸರು ಕಲೆ ಹಾಕುವ ಕಾರ್ಯ ಮುಂದುವರಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8412 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment