ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಜೂನ್ 1ರವರೆಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದರಿಂದ ಅರವಿಂದ್ ಕೇಜ್ರಿವಾಲ್ 50 ದಿನಗಳ ಜೈಲುವಾಸಕ್ಕೆ ತಾತ್ಕಾಲಿಕ ಬಿಡುಗಡೆ ಭಾಗ್ಯ ಸಿಕ್ಕಿದಂತಾಗಿದೆ.
ಮದ್ಯ ನೀತಿ ಹಗರಣದಲ್ಲಿ ಕಿಂಗ್ ಪಿನ್ ಆಗಿರುವ ಅರವಿಂದ್ ಕೇಜ್ರಿವಾಲ್ ಜಾಮೀನಿಗೆ ಸಿಬಿಐ ಆಕ್ಷೇಪ ವ್ಯಕ್ತಪಡಿಸಿತ್ತು. ಚುನಾವಣೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವುದು ನೈತಿಕತೆ ಅಲ್ಲ ಎಂದು ಸುಪ್ರೀಂಕೋರ್ಟ್ ವಾದಿಸಿತ್ತು. ಅಲ್ಲದೇ ಚುನಾವಣೆಯಲ್ಲಿ ಪಾಲ್ಗೊಳ್ಳುವುದು ಮೂಲಭೂತ ಹಕ್ಕು ಅಲ್ಲ ಎಂದು ಹೇಳಿತ್ತು.
ಸಿಬಿಐ ವಾದವನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಜೂನ್ 1ರವರೆಗೆ ಅಂದರೆ ಸುಮಾರು 20 ದಿನಗಳ ಕಾಲ ಪ್ರಚಾರ ಮಾಡಲು ಅವಕಾಶ ನೀಡಿದೆ.