Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ದೇಶ

ಬಿಜೆಪಿ-ಎಐಎಡಿಎಂಕೆ ಮರು ಮೈತ್ರಿ: ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 5 ವೀಕ್ಷಣೆಗಳು
Annamalai
Annamalai

ಮುಂಬರುವ ವಿಧಾನಸಭಾ ಚುನಾವಣೆಗೆ ಎಐಎಡಿಎಂ ಮತ್ತು ಬಿಜೆಪಿ ಮೈತ್ರಿ ಮಾಡಿಕೊಳ್ಳಲು ಮುಂದಾದ ಬೆನ್ನಲ್ಲೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಿಸಿದ್ದಾರೆ.

ಕೊಯಮತ್ತೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷ ಹುದ್ದೆಗೆ ನಾನು ಸ್ಪರ್ಧೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ನಾನು ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿಲ್ಲ ಎಂದು ಹೇಳಿದ್ದಾರೆ.

ಪಕ್ಷಕ್ಕೆ ಉಜ್ವಲ ಭವಿಷ್ಯ ಇರಬೇಕೆಂದು ನಾನು ಬಯಸುತ್ತೇನೆ. ಅನೇಕ ನಾಯಕರು ಬಿಜೆಪಿ ಬೆಳವಣಿಗೆಗಾಗಿ ತಮ್ಮ ಪ್ರಾಣವನ್ನೇ ನೀಡಿದ್ದಾರೆ. ನಾನೂ ಸಹ ಈ ಪಕ್ಷಕ್ಕೆ ಒಳ್ಳೆಯದನ್ನೇ ಬಯಸುತ್ತೇನೆ. ಹಾಗಾಗಿ ಈ ಬಾರಿ ನಾನು ಪಕ್ಷದ ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿ ಇಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಇದರ ಹೊರತಾಗಿ ನಾನು ಯಾವುದೇ ರಾಜಕೀಯ ಊಹಾಪೋಹಗಳಿಗೆ ಉತ್ತರ ಕೊಡಲ್ಲ ಅಂತ ತಿಳಿಸಿದ್ದಾರೆ.

ಬಿಜೆಪಿ ಇತರ ಪಕ್ಷಗಳಿಗಿಂತ ಭಿನ್ನವಾಗಿದೆ. ಪ್ರತಿ ಪಕ್ಷಗಳಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ 50 ಜನ ನಾಮಪತ್ರ ಸಲ್ಲಿಸುತ್ತಾರೆ. ಆದ್ರೆ ನಮ್ಮಲ್ಲಿ ಒಗ್ಗಟ್ಟಿನಿಂದ ಅಧ್ಯಕ್ಷರನ್ನ ಆಯ್ಕೆ ಮಾಡುತ್ತೇವೆ ಅಂತ ಅಣ್ಣಾಮಲೈ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

2023 ರಲ್ಲಿ ಎಐಎಡಿಎಂಕೆ (AIADMK) ಮತ್ತು ಬಿಜೆಪಿ ವಿಭಜನೆಯಾಗಲು ಅಣ್ಣಾಮಲೈ ಕಾರಣ ಎನ್ನಲಾಗಿತ್ತು. ಇದೀಗ ಪಕ್ಷಗಳ ನಡುವಿನ ಮೈತ್ರಿ ಮಾತುಕತೆಗಳು ಚುರುಕುಗೊಂಡ ಹಿನ್ನೆಲೆ ಅಣ್ಣಾಮಲೈ ಬಿಜೆಪಿ ತಮಿಳುನಾಡು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ರಾಜ್ಯದಲ್ಲಿ ಬಿಜೆಪಿ ತನ್ನ ಹೆಜ್ಜೆಗುರುತು ಹೆಚ್ಚಿಸಲು ಪ್ರಯತ್ನಿಸುತ್ತಿರುವ ಜಾತಿ ಸಮೀಕರಣಗಳನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment