Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಅಪರಾಧ

ಬೆಂಗಳೂರಿನಲ್ಲಿ ಬ್ಯಾಡ್ಮಿಂಟನ್ ಕೋಚ್ ನಿಂದ ಬಾಲಕಿ ಮೇಲೆ ಅತ್ಯಾಚಾರ; ಯುವ ಸ್ಪರ್ಧಿಗಳ ಅಶ್ಲೀಲ ವೀಡಿಯೊ ಪತ್ತೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 31 ವೀಕ್ಷಣೆಗಳು
badminton coach

ಬ್ಯಾಡ್ಮಿಂಟನ್ ಕೋಚ್ ತರಬೇತಿಗೆ ಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ತಮಿಳುನಾಡು ಮೂಲದ ಬ್ಯಾಡ್ಮಿಂಟನ್ ಕೋಚ್ ಸುರೇಶ್ ಬಾಲಾಜಿ (26) ಅವರನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಕೋಚಿಂಗ್ ಸೇರಿದ್ದ ಬಾಲಕಿಯನ್ನು ಆಗಾಗ್ಗೆ ಮನೆಗೆ ಕರೆದುಕೊಂಡು ಹೋಗುತ್ತಿದ್ದ ಬ್ಯಾಡ್ಮಿಂಟನ್ ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಯಾರ ಬಳಿಯೂ ಬಾಯಿ ಬಿಡದಂತೆ ಬಾಲಕಿಗೆ ಹೇಳಿದ್ದ. ಅಲ್ಲದೇ ಈ ರೀತಿ ಹಲವು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿರುವುದು ವಿಚಾರಣೆಗೆ ವೇಳೆ ಬೆಳಕಿಗೆ ಬಂದಿದೆ.

ಬಾಲಕಿ ರಜೆಗೆ ಅಜ್ಜಿಯ ಮನೆಗೆ ಬಂದಾಗ ಮೊಬೈಲ್ ನಿಂದ ತನ್ನ ನಗ್ನ ಪೋಟೋವನ್ನು ಸುರೇಶ್​ಗೆ ಶೇರ್ ಮಾಡಿದ್ದಾಳೆ. ಕುಟುಂಬದವರು ಮೊಬೈಲ್​ ನೋಡಿದಾಗ ಅಜ್ಜಿಗೆ ಆಘಾತವಾಗಿದ್ದು, ಕೂಡಲೇ ಪೋಷಕರನ್ನು ಕರೆಸಿ ವಿಷಯ ತಿಳಿಸಿದ್ದಾರೆ.

ಬಾಲಕಿಯನ್ನ ವಿಚಾರಿಸಿದಾಗ ಕೋಚ್​ ಸುರೇಶ್ ದೌರ್ಜನ್ಯ ಬೆಳಕಿಗೆ ಬಂದಿದ್ದು, ಕೋಚ್ ಸುರೇಶ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.  ಈ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಇದೇ ವೇಳೆ ಆರೋಪಿ ಮೊಬೈಲ್​ ಪರಿಶೀಲನೆ ಮಾಡಿದಾಗ ಕ್ರೀಡಾ ತರಬೇತಿ ಕೇಂದ್ರದಲ್ಲಿ ಹಲವು ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಕಿರುಕುಳ ನೀಡಿರುವುದು ಕಂಡುಬಂದಿದೆ.

ಮೊಬೈಲ್​ನಲ್ಲಿ 13 ರಿಂದ 16 ವರ್ಷ ವಯಸ್ಸಿನ ಹಲವು ಹುಡುಗಿಯರ ನಗ್ನ ಫೋಟೋಗಳು ಮತ್ತು ವೀಡಿಯೊಗಳು ಸಹ ಪತ್ತೆಯಾಗಿವೆ. ಆರೋಪಿ ಸುರೇಶ್ ಬಾಲಾಜಿಗೆ ನ್ಯಾಯಾಲಯ 8 ದಿನಗಳ ಕಾಲ ಕಸ್ಟಡಿಗೆ ನೀಡಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment