Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ಕ್ರೀಡೆ

ಡೆಲ್ಲಿಗೆ ಜಯ ತಂದ ರಾಹುಲ್ ಆಟ: ಚೆನ್ನೈಗೆ ತವರಿನಲ್ಲೇ 25 ರನ್ ಮುಖಭಂಗ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 22 ವೀಕ್ಷಣೆಗಳು
kl rahul

ಆರಂಭಿಕ ಕೆಎಲ್ ರಾಹುಲ್ ಆಡಿದ ಮೊದಲ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲುವು ತಂದುಕೊಟ್ಟರೆ, ಐಪಿಎಲ್ ಟಿ-20 ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ 25 ರನ್ ಗಳ ಸೋಲುಂಡಿದೆ.

ಚೆನ್ನೈನಲ್ಲಿ ಶನಿವಾರ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 183 ರನ್ ಪೇರಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 158 ರನ್ ಗಳಿಸಲಷ್ಟೇ ಶಕ್ತವಾಯಿತು.

ಡೆಲ್ಲಿ ಕ್ಯಾಪಿಟಲ್ಸ್ ಹ್ಯಾಟ್ರಿಕ್ ಗೆಲುವಿನೊಂದಿಗೆ ಐಪಿಎಲ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಚೆನ್ನೈ ಸೂಪರ್ ಕಿಂಗ್ಸ್ 4 ಪಂದ್ಯಗಳಲ್ಲಿ 1 ಜಯ ಹಾಗೂ 3 ಸೋಲಿನೊಂದಿಗೆ 2 ಅಂಕ ಸಂಪಾದಿಸಿ 8ನೇ ಸ್ಥಾನಕ್ಕೆ ಕುಸಿಯಿತು.

ಸ್ಪಿನ್ನರ್ ಗಳಿಗೆ ನೆರವಾಗುವ ತವರಿನ ಪಿಚ್ ನಲ್ಲಿ ರನ್ ಗಳಿಸಲು ಪರದಾಟ ನಡೆಸಿದ ಚೆನ್ನೈ 74 ರನ್ ಗೆ 5 ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು. 6ನೇ ಕ್ರಮಾಂಕದಲ್ಲಿ ಆಡಲಿಳಿದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ವಿಜಯ ಶಂಕರ್ ಮುರಿಯದ 6ನೇ ವಿಕೆಟ್ ಗೆ 84 ರನ್ ಜೊತೆಯಾಟ ನಿಭಾಯಿಸಿದರೂ ಯಾವುದೇ ಹಂತದಲ್ಲೂ ಗೆಲುವಿನ ಸೂಚನೆ ನೀಡಲಿಲ್ಲ.

ವಿಜಯ್ ಶಂಕರ್ 54 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 69 ರನ್ ಬಾರಿಸಿದರೆ, ಧೋನಿ 26 ಎಸೆತಗಳಲ್ಲಿ ತಲಾ 1 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 30 ರನ್ ಬಾರಿಸಿ ಔಟಾಗದೇ ಉಳಿದರು.

ಡೆಲ್ಲಿಗೆ ರಾಹುಲ್ ಆಸರೆ

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಖಾತೆ ತೆರೆಯುವ ಮುನ್ನವೇ ಜಾಕ್ ಫ್ರೇಜರ್ ವಿಕೆಟ್ ಕಳೆದುಕೊಂಡಿತು. ಆದರೆ ವೈಯಕ್ತಿಕ ಕಾರಣದಿಂದ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಕೆಎಲ್ ರಾಹುಲ್ ಮತ್ತು ಅಭಿಷೇಕ್ ಪೊರಲ್ (34) ಎರಡನೇ ವಿಕೆಟ್ ಗೆ 54 ರನ್ ಜೊತೆಯಾಟದಿಂದ ತಂಡವನ್ನು ಆಧರಿಸಿತು.

ರಾಹುಲ್ 51 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್ ಒಳಗೊಂಡ 77 ರನ್ ಬಾರಿಸಿ ತಂಡ ಬೃಹತ್ ಮೊತ್ತ ಪೇರಿಸಲು ನೆರವಾದರೆ, ನಾಯಕ ಅಕ್ಸರ್ ಪಟೇಲ್ (21), ಸಮೀರ್ ರಿಜ್ವಿ (20) ಮತ್ತು ಟಿಟ್ಸನ್ ಸ್ಟಬ್ಸ್ (24 ರನ್ 12 ಎಸೆತ, 2 ಬೌಂಡರಿ, 1 ಸಿಕ್ಸರ್) ಉಪಯುಕ್ತ ಕಾಣಿಕೆ ನೀಡಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment