Saturday, June 27, 2026
Google search engine
Homeರಾಜ್ಯಡೀಸೆಲ್ ದರ ಹೆಚ್ಚಳ ಖಂಡಿಸಿ ಏ.15ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಡೀಸೆಲ್ ದರ ಹೆಚ್ಚಳ ಖಂಡಿಸಿ ಏ.15ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಬೆಂಗಳೂರು:ರಾಜ್ಯ ಸರ್ಕಾರ ಡೀಸೆಲ್ ದರ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಇದೇ ಏಪ್ರಿಲ್ 15 ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಮುಷ್ಕರ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಲಾರಿಗಳ ಸಂಚಾರ ಸ್ಥಗಿತಗೊಳ್ಳಲಿದ್ದು, ಗೂಡ್ಸ್ ವಾಹನಗಳು, ಏರ್‌ಪೋರ್ಟ್‌ ಟ್ಯಾಕ್ಸಿಗಳ ಸಂಪೂರ್ಣ ಬಂದ್‌ ಆಗಲಿದೆ ಎಂದು ಎಂದು ಲಾರಿ ಮಾಲೀಕರ‌ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ.

ಲಾರ ಮಾಲೀಕರ ಸಂಘದ ಪ್ರತಿನಿಧಿಗಳ ಜೊತೆ ಶನಿವಾರ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೇಲ್ ಬೆಲೆ 7 ತಿಂಗಳಲ್ಲಿ 5 ರೂ ಏರಿಕೆಯಾಗಿದೆ. ಇದು ಲಾರಿ ಸೇರಿದಂತೆ ವಾಣಿಜ್ಯ ವಾಹನಗಳ ಮಾಲೀಕರು ನೇಣು ಹಾಕಿಕೊಳ್ಳುವ ಸ್ಥಿತಿ ಬಂದಿದೆ. ಏನಾದರೂ ಉಚಿತವಾಗಿ ಕೊಡಲಿ, ಆದರೆ ಹೊಟ್ಟೆ ಮೇಲೆ ಹೊಡೆದು ದರ ಏರಿಕೆ ಮಾಡಿರುವುದು ಏಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಫಿಟ್ನೆಸ್ ಫೀಸ್, ಬಾರ್ಡರ್ ಚೆಕ್ ಪೋಸ್ಟ್, ಡಿಸೇಲ್ ದರ ಸೇರಿದಂತೆ ಪ್ರಮುಖ ಬೇಡಿಕೆಗಳನ್ನ ಈಡೇರಿಕೆಗೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ. 14ನೇ ತಾರೀಖು ಅಂಬೇಡ್ಕರ್ ಜಯಂತಿ ರಾತ್ರಿಯಿಂದಲೇ ಹೋರಾಟ ಶುರು ಮಾಡಲಿದ್ದೇವೆ. ಬೇಡಿಕೆ ಈಡೇರುವವರೆಗೆ ಕರ್ನಾಟಕದ ಒಳಗೆ ಯಾರೂ ಬರಲ್ಲ. ಇದಕ್ಕೆ ಪೆಟ್ರೋಲ್ ಮಾಲೀಕರು ಬೆಂಬಲಕೊಟ್ಟಿದ್ದಾರೆ ಎಂದರು.

ಏರ್ಪೋಟ್ ಟ್ಯಾಕ್ಸಿ, ಜಲ್ಲಿ ಮರಳು, ಸೇರಿದಂತೆ ಗೂಡ್ಸ್ ವಾಹನಗಳು ಬಂದ್ ಆಗಲಿವೆ. ಎಲ್ಲಾ ಬಗೆಯ ವಾಣಿಜ್ಯ ವಾಹನಗಳ 9 ಲಕ್ಷ ವಾಹನಗಳು ಸ್ಥಗಿತಗೊಳ್ಳಲಿವೆ ಎಂದು ತಿಳಿಸಿದರು.

ಏಪ್ರಿಲ್‌ 14ರ ವರೆಗೆ ಸರ್ಕಾರಕ್ಕೆ ಗಡುವು ನೀಡುತ್ತೇವೆ. ಸರ್ಕಾರ ನಮ್ಮ ಬೇಡಿಕೆಗಳಿಗೆ ಮಣಿಯದಿದ್ದರೆ, 14ರ ರಾತ್ರಿಯಿಂದಲೇ ಹೋರಾಟ ಆರಂಭಿಸುತ್ತೇವೆ ಹೋರಾಟ ಆರಂಭವಾದ ಬಳಿಕ ಯಾವುದೇ ರಾಜ್ಯದಿಂದ ಕರ್ನಾಟಕ ಒಳಗೆ ವಾಣಿಜ್ಯ ವಾಹನ ಸಂಚಾರ ಮಾಡಲ್ಲ. ಚೆಕ್ ಪೋಸ್ಟ್‌ಗಳಲ್ಲಿ ಖುದ್ದು ನಾವುಗಳೇ ನಿಲ್ಲುತ್ತೇವೆ. ಯಾವುದೇ ವಾಣಿಜ್ಯ ವಾಹನಗಳನ್ನು ಒಳಗಡೆ ಬಿಡದಂತೆ ನೋಡಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಏಪ್ರಿಲ್‌ 15ರಿಂದ ಏರ್ ಪೋರ್ಟ್ ಟ್ಯಾಕ್ಸಿ, ಜಲ್ಲಿ ಕಲ್ಲು, ಮರಳು ಲಾರಿ, ಗೂಡ್ಸ್ ವಾಹನಗಳು ಸೇರಿದಂತೆ 6 ಲಕ್ಷ ಲಾರಿಗಳ ಸಂಚಾರ ಬಂದ್‌ ಆಗಲಿದೆ. ಜೊತೆಗೆ ಅಕ್ಕಿ ಲೊಡ್, ಗೂಡ್ಸ್, ಪೆಟ್ರೋಲ್ ಡಿಸೇಲ್ ಲಾರಿಗಳನ್ನೂ ಬಂದ್‌ ಮಾಡಲಾಗುತ್ತದೆ. ಇದಕ್ಕೆ ಚಾಲಕರ ಸಂಘದಿಂದಲೂ ಬೆಂಬಲ ವ್ಯಕ್ತವಾಗಿದೆ. ಎಲ್ಲಾ ಬಗೆಯ ವಾಣಿಜ್ಯ ವಾಹನಗಳ 9 ಲಕ್ಷ ವಾಹನಗಳ ಸಂಚಾರ ಸ್ಥಗಿತವಾಗಲಿವೆ ಎಂದು ಅವರು ವಿವರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments