ಮುಂಬೈ: ಮುಂಬೈ ಇಂಡಿಯನ್ಸ್ ಸೋಮವಾರದ ಐಪಿಎಲ್ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದು ಆರ್ ಸಿಬಿಗೆ ಮೊದಲು ಬ್ಯಾಟ್ ಮಾಡಲು ಆಹ್ವಾನಿಸಿದೆ.
ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ರನ್ ಚೇಸ್ ಮಾಡಲು ನಿರ್ಧರಿಸಿದರು. ಆರ್ ಸಿಬಿ ತಂಡ ಕೂಡ ಫೀಲ್ಡಿಂಗ್ ಆಯ್ಕೆ ಮಾಡಲು ಬಯಸಿದ್ದರೂ ಬ್ಯಾಟಿಂಗ್ ಗೆ ಹೇಳಿ ಮಾಡಿದ ಪಿಚ್ ನಲ್ಲಿ ಹೆಚ್ಚು ವ್ಯಾತ್ಯಾಸ ಆಗುವುದಿಲ್ಲ ಎಂದು ನಾಯಕ ರಜತ್ ಪಟಿದಾರ್ ಹೇಳಿದ್ದಾರೆ.
ಆರ್ ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಆದರೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಗಾಯದಿಂದ ಚೇತರಿಸಿಕೊಂಡಿರುವ ಜಸ್ ಪ್ರೀತ್ ಬುಮ್ರಾ ಮತ್ತು ರೋಹಿತ್ ಶರ್ಮ ಮರಳಿದ್ದಾರೆ. ರೋಹಿತ್ ಶರ್ಮ ಇಂಪ್ಯಾಕ್ಟ್ ಆಟಗಾರನಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.



