Wednesday, October 23, 2024
Google search engine
Homeಕ್ರೀಡೆಐಪಿಎಲ್: ಕೆಕೆಆರ್ ಮೊದಲ ತಂಡವಾಗಿ ಪ್ಲೇ ಆಫ್ ಗೆ ಅಧಿಕೃತ ಪ್ರವೇಶ: ಮುಂಬೈಗೆ 9ನೇ ಸೋಲು

ಐಪಿಎಲ್: ಕೆಕೆಆರ್ ಮೊದಲ ತಂಡವಾಗಿ ಪ್ಲೇ ಆಫ್ ಗೆ ಅಧಿಕೃತ ಪ್ರವೇಶ: ಮುಂಬೈಗೆ 9ನೇ ಸೋಲು

ಸಂಘಟಿತ ಪ್ರದರ್ಶನ ನೀಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ 18 ರನ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯ 2024ರ ಆವೃತ್ತಿಯಲ್ಲಿ ಪ್ಲೇಆಫ್ ಗೆ ಅಧಿಕೃತ ಪ್ರವೇಶ ಪಡೆದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶನಿವಾರ ಮಳೆಯಿಂದ 16 ಓವರ್ ಗಳಿಗೆ ಕಡಿತಗೊಂಡ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 7 ವಿಕೆಟ್ ಕಳೆದುಕೊಂಡು 157 ರನ್ ಗಳಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಮುಂಬೈ ಇಂಡಿಯನ್ಸ್ 8 ವಿಕೆಟ್ ಗೆ 138 ರನ್ ಗಳಿಸಲಷ್ಟೇ ಶಕ್ತವಾಯಿತು.

ಕೆಕೆಆರ್ ತಂಡ 12 ಪಂದ್ಯಗಳಿಂದ 9 ಗೆಲುವು 3 ಸೋಲಿನೊಂದಿಗೆ 18 ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿ ಪ್ಲೇಆಫ್ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಮುಂಬೈ ಇಂಡಿಯನ್ಸ್ 13 ಪಂದ್ಯಗಳಿಂದ 9 ಸೋಲು ಹಾಗೂ 4 ಗೆಲುವಿನೊಂದಿಗೆ 8 ಅಂಕ ಗಳಿಸಿ ಕೊನೆಯ ಸ್ಥಾನಕ್ಕೆ ಕುಸಿದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments