Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
Uncategorized

ಅತ್ಯಾಚಾರಿ ಎನ್ ಕೌಂಟರ್ ಮಾಡಿದ ಪಿಎಸ್ಐ ಅನ್ನಪೂರ್ಣಗೆ ಅತ್ಯುನ್ನತ ಪದಕಕ್ಕೆ ಶಿಫಾರಸ್ಸು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 20 ವೀಕ್ಷಣೆಗಳು
Llaxmi hebbalkar- psi annapurna

ಬೆಳಗಾವಿ: ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಎನ್‌ಕೌಂಟರ್ ಮಾಡಿದ ಪಿಎಸ್‌ಐ ಅನ್ನಪೂರ್ಣ ಅವರಿಗೆ ಅತ್ಯುನ್ನತ ಪದಕ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರಿಗೆ ಶಿಫಾರಸ್ಸು ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಸೋಮವಾರ ಬೆಳಗಾವಿಯಲ್ಲಿ ಮಾತನಾಡಿದ ಸಚಿವರು, ಪಿಎಸ್‌ಐ ಅನ್ನಪೂರ್ಣ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸುತ್ತೇನೆ. ನಾನು ಓರ್ವ ಸಚಿವೆಯಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ನಾನು ಹಿಂದಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದೇನೆ. ಇಂಥ ಪ್ರಕರಣದ ಆರೋಪಿಗಳಿಗೆ ಗಲ್ಲುಶಿಕ್ಷೆ ಆಗಬೇಕು, ದೌರ್ಜನ್ಯಕ್ಕೆ ಒಳಗಾದವರಿಗೆ ತ್ವರಿತವಾಗಿ ನ್ಯಾಯಸಿಗಬೇಕು. ಅನ್ನಪೂರ್ಣ ಅವರ ಕಾರ್ಯ ಇತರ ಅಧಿಕಾರಿಗಳಿಗೆ ದಾರಿ ದೀಪವಾಗಬೇಕು ಎಂದು ಸಚಿವರು ಹೇಳಿದರು.

ಇಂತಹ ಪಿಡುಗು ನಮ್ಮ ಸಮಾಜದಿಂದ ನಿರ್ಮೂಲನೆ ಆಗಬೇಕು. ಸರ್ಕಾರಿ ನೌಕರರಿಗೆ ನಮ್ಮ ಇಲಾಖೆಯಿಂದ ಕೊಡ ಮಾಡುವ ರಾಣಿ ಚನ್ನಮ್ಮ ಪ್ರಶಸ್ತಿ ನೀಡವುದಿಲ್ಲ. ಒಂದು ವೇಳೆ ಸರ್ಕಾರಿ ನೌಕರರಿಗೆ ಕೊಡಬೇಕು ಅಂತ ಬಂದರೆ ಅನ್ನಪೂರ್ಣ ಅವರ ಹೆಸರು ಮೊದಲಿರುತ್ತದೆ ಎಂದು ಉತ್ತರಿಸಿದರು.

ಇಂಥ ಘಟನೆ ನಡೆದಾಗ ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ. ಕರ್ನಾಟಕವನ್ನು ಬೇರೆ ರಾಜ್ಯಗಳಿಗೆ  ಹೋಲಿಸಲು ನಾನು ಇಷ್ಟಪಡುವುದಿಲ್ಲ. ನಮ್ಮಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ನಮ್ಮನ್ನು ಟೀಕಿಸುವ ಬದಲಿಗೆ ಬಿಜೆಪಿಗರು ಮಣಿಪುರಕ್ಕೆ ಒಮ್ಮೆ ಭೇಟಿ ನೀಡಲಿ, ಪ್ರಧಾನಿ ನರೇಂದ್ರ  ಮೋದಿ ಒಮ್ಮೆಯೂ ಅಲ್ಲಿಗೆ ಭೇಟಿ ಕೊಟ್ಟಿಲ್ಲ ಎಂದು ಸಚಿವರು ತಿರುಗೇಟು ನೀಡಿದರು.

ನಿಪ್ಪಾಣಿಯಲ್ಲಿ ಸರ್ಕಾರದಿಂದ ಕಾರ್ಯಕ್ರಮ

ನಿಪ್ಪಾಣಿಗೆ ಅಂಬೇಡ್ಕರ್ ಭೇಟಿ ನೀಡಿ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಿಜೆಪಿಯವರು ಭೀಮ ಹೆಜ್ಜೆ ಹೆಸರಿನಲ್ಲಿ ಸಮಾವೇಶ ಮಾಡುತ್ತಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕಾಂಗ್ರೆಸ್ ಪಕ್ಷ ಸಂವಿಧಾನವನ್ನು ಶ್ರದ್ಧಾ, ಭಕ್ತಿಯಿಂದ ನಂಬಿದೆ. ನಿಪ್ಪಾಣಿಯಲ್ಲಿ ಕಾರ್ಯಕ್ರಮ ಆಯೋಜನೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ಆಗಿದ್ದು, ಸರ್ಕಾರದಿಂದ ಕಾರ್ಯಕ್ರಮ ಮಾಡಲಾಗುವುದು ಎಂದರು.

ಜಾತಿ ಗಣತಿಗೆ ವಿರೋಧವಿಲ್ಲ

ಜಾತಿ ಗಣತಿ ಬಿಡುಗಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಜಾತಿ ಗಣತಿಗೆ ನಮ್ಮ ವಿರೋಧ ಯಾವತ್ತೂ ಇಲ್ಲ. ವೀರಶೈವ- ಲಿಂಗಾಯತರನ್ನು ಪ್ರತ್ಯೇಕ ಮಾಡಿ ಗಣತಿ ಮಾಡಲಾಗಿದೆ. ಅದನ್ನು ಸರಿಪಡಿಸಿ ಇನ್ನೊಮ್ಮೆ ಗಣತಿಯನ್ನು ಇನ್ನೊಮ್ಮೆ  ಮಾಡಬೇಕು. ಎಲ್ಲಾ ಜಾತಿಯಲ್ಲಿ ಜನರು ಹೆಚ್ಚಾಗಿದ್ದಾರೆ. ಅದರಂತೆ ನಮ್ಮ ವೀರಶೈವ, ಲಿಂಗಾಯತರಲ್ಲಿಯೂ ಜನ ಹೆಚ್ಚಾಗಿದ್ದಾರೆ. ಹೀಗಾಗಿ ವೀರಶೈವ- ಲಿಂಗಾಯತರು ಒಡೆದು ಹೋಗಿದ್ದು ಅಂಕಿ ಅಂಶ ಕಡಿಮೆ ಕಾಣಿಸುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment