Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕಾನೂನು

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ,ಪತ್ನಿ ಪಾರ್ವತಿ ಸೇರಿ ನಾಲ್ವರಿಗೆ ಹೈಕೋರ್ಟ್ ನೋಟಿಸ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 33 ವೀಕ್ಷಣೆಗಳು
karnataka high court
karnataka high court

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಿ ಹಗರಣದ ತನಿಖೆಯನ್ನು ಸಿಬಿಐಗೆ ಸಲ್ಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ, ಪತ್ನಿ ಬಿಎಂ ಪಾರ್ವತಿ ಸೇರಿದಂತೆ ನಾಲ್ವರಿಗೆ ನೋಟಿಸ್ ಜಾರಿ ಮಾಡಿದೆ.

ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್  ವಿಭಾಗೀಯ ಪೀಠ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಬಿ.ಎಂ.ಪಾರ್ವತಿ, ಭಾವಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಭೂಮಾಲೀಕ ದೇವರಾಜು ಸೇರಿ ನಾಲ್ವರಿಗೆ ನೋಟೀಸ್ ಜಾರಿ ಮಾಡಿದೆ.

ಮುಡಾ ಹಗರಣದ ತನಿಖೆಯನ್ನು ಲೋಕಾಯುಕ್ತ ನಡೆಸುತ್ತಿದ್ದು, ಆ ಸಂಸ್ಥೆಯಿಂದ ಪಾರದರ್ಶಕ ತನಿಖೆಯಾಗುತ್ತಿಲ್ಲ. ಹೀಗಾಗಿ, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್​ ಏಕ ಸದಸ್ಯ ಪೀಠ ನಿರಾಕರಿಸಿತ್ತು.

ಸ್ನೇಹಮಯಿ ಕೃಷ್ಣ ಹೈಕೋರ್ಟ್​ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಬುಧವಾರ ವಿಚಾರಣೆ ನಡೆಸಿದ ಹೈಕೋರ್ಟ್​ ವಿಭಾಗೀಯ ಪೀಠ ಅರ್ಜಿಯ ಸಂಬಂಧ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಭಾವಮೈದ ಮಲ್ಲಿಕಾರ್ಜನ ಸ್ವಾಮಿ, ಭೂಮಾಲೀಕ ದೇವರಾಜು, ಸಿಬಿಐ, ಕೇಂದ್ರ ಗೃಹ ಇಲಾಖೆ,‌ ಲೋಕಾಯುಕ್ತ ಪೊಲೀಸರಿಗೂ ನೋಟಿಸ್ ನೀಡಿ ಏಪ್ರಿಲ್ 28ಕ್ಕೆ ವಿಚಾರಣೆ ಮುಂದೂಡಿದೆ.

ಮತ್ತೆ ಲೋಕಾ ವಿಚಾರಣೆ:

ಮುಡಾದಲ್ಲಿ 130ಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಇವೆ. ಹೀಗಾಗಿ, ಈ ಎಲ್ಲ ಪ್ರಕರಣಗಳ ತನಿಖೆ ನಡೆಸಿ ಮೇ 7ರೊಳಗೆ ಅಂತಿಮ ವರದಿ ಸಲ್ಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಇಂದಿನಿಂದ ಮತ್ತೆ ವಿಚಾರಣೆ ಆರಂಭಿಸಿದೆ. ಲೋಕಾಯುಕ್ತ ಪೊಲೀಸರು ಸಿಎಂ ಮತ್ತು ಅವರ ಪತ್ನಿ ಪಾರ್ವತಿಗೆ ಕ್ಲೀನ್​ಚಿಟ್ ನೀಡಿತ್ತು.

ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್

ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾ ಗೊಳಿಸಿತ್ತು. ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಲೋಕಾಯುಕ್ತ ತನಿಖೆ ತಾರತಮ್ಯಪೂರಿತ ಎಂಬುದಕ್ಕೆ ಆಧಾರಗಳಿಲ್ಲ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಪ್ರಕರಣವನ್ನು ಸಿಬಿಐಗೆ ನೀಡಲು ನಿರಾಕರಿಸಿ ಆದೇಶ ಹೊರಡಿಸಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment