Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ರಾಜಸ್ಥಾನ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ `ಸೂಪರ್’ ಜಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 26 ವೀಕ್ಷಣೆಗಳು
kl rahul

ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ ನ 18ರ ಆವೃತ್ತಿಯ ಮೊದಲಸೂಪರ್ ಓವರ್ ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ.

ದೆಹಲಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಗೆ 188 ರನ್ ಸಂಪಾದಿಸಿತು. ಪೈಪೋಟಿಯ ಮೊತ್ತ ಬೆಂಬತ್ತಿದ ರಾಜಸ್ಥಾನ್ ರಾಯಲ್ಸ್ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 188 ರನ್ ಗಳಿಸಿತು.

ಮಿಚೆಲ್ ಸ್ಟಾರ್ಕ್ ಎಸೆತ ಕೊನೆಯ ಓವರ್ ನಲ್ಲಿ ರಾಜಸ್ಥಾನ್ 9 ರನ್ ಗಳಿಸಬೇಕಿತ್ತು. ಕೇವಲ 3 ವಿಕೆಟ್ ಕಳೆದುಕೊಂಡು ಸುಸ್ಥಿತಿಯಲ್ಲಿದ್ದರೂ ಸ್ಫೋಟಕ ಬ್ಯಾಟ್ಸ್ ಮನ್ ಹೆಟ್ಮೇಯರ್ ಮತ್ತು ಧ್ರುವ ಜುರೆಲ್ 8 ರನ್ ಗಳಿಸಲಷ್ಟೇ ಶಕ್ತವಾದರು. ಸ್ಟಾರ್ಕ್ ಒಂದೇ ಒಂದು ಬೌಂಡರಿ ಕೊಡದೇ ಕಡಿವಾಣ ಹಾಕಿದರು.

ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 4 ಎಸೆತಗಳಲ್ಲಿ 11 ರನ್ ಗಳಿಸಿದ್ದಾಗಲೇ 2 ವಿಕೆಟ್ ಕಳೆದುಕೊಂಡು ಆಲೌಟಾಯಿತು. ರಾಜಸ್ಥಾನ್ ಮೊದಲ 3 ಎಸೆತಗಳಲ್ಲಿ 2 ಬೌಂಡರಿ ಪಡೆದರೂ ನಂತರದ 2 ಎಸೆತಗಳಲ್ಲಿ ಇಲ್ಲದ ರನ್ ಕದಿಯುವ ಯತ್ನದಲ್ಲಿ 2 ವಿಕೆಟ್ ಕಳೆದುಕೊಂಡಿತು. ಸ್ಟಾರ್ಕ್ ಒಂದು ನೋಬಾಲ್ ಎಸೆದರೂ 11 ರನ್ ಮಾತ್ರ ನೀಡಿದರು.

ನಂತರ ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಅಖಾಡಕ್ಕೆ ಇಳಿದ ಸ್ಟಬ್ಸ್ ಮತ್ತು ಕೆಎಲ್ ರಾಹುಲ್ ಇಳಿದರು. ಡೆಲ್ಲಿ 2 ಎಸೆತಗಳು ಬಾಕಿ ಇರುವಂತೆಯೇ ರೋಚಕ ಜಯ ಸಾಧಿಸಿತು. ರಾಹುಲ್ 1 ಬೌಂಡರಿ ಸೇರಿದಂತೆ 7 ರನ್ ಬಾರಿಸಿದರೆ, ಸ್ಟಬ್ಸ್ ಒಂದು ಸಿಕ್ಸರ್ ಸಿಡಿಸಿ ರೋಚಕ ಜಯ ತಂದುಕೊಟ್ಟರು.

ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ 7 ಪಂದ್ಯಗಳಿಂದ 3 ಜಯ ಹಾಗೂ 4 ಸೋಲಿನೊಂದಿಗೆ 6 ಅಂಕ ಸಂಪಾದಿಸಿದರೆ, ಡೆಲ್ಲಿ ಕ್ಯಾಪಿಟಲ್ಸ್ 6 ಪಂದ್ಯಗಳಿಂದ 5 ಜಯ ಹಾಗೂ 1 ಸೋಲಿನೊಂದಿಗೆ 10 ಅಂಕ ಸಂಪಾದಿಸಿ ಅಗ್ರಸ್ಥಾನಕ್ಕೆ ಮರಳಿದೆ.

ರಾಜಸ್ಥಾನ್ ತಂಡ ಜೈಸ್ವಾಲ್ (51 ರನ್, 37 ಎಸೆತ, 3 ಬೌಂಡರಿ, 4 ಸಿಕ್ಸರ್) ಮತ್ತು ನಿತಿನ್ ರಾಣಾ (51 ರನ್, 28 ಎಸೆತ, 6 ಬೌಂಡರಿ, 2 ಸಿಕ್ಸರ್) ಅವರ ಅರ್ಧಶತಕಗಳ ನೆರವಿನಿಂದ ಸುಲಭ ಗೆಲುವಿನ ಭರವಸೆ ಮೂಡಿತ್ತು. ಆದರೆ ಕೊನೆಯ ಹಂತದಲ್ಲಿ ರನ್ ಗಳಿಸಲು ಪರದಾಡಿದ್ದರಿಂದ ತಂಡ ಕೊನೆಯ ಹಂತದಲ್ಲಿ ಎಡವಿ ಗೆಲುವಿನ ಗೆರೆ ದಾಟಲು ವಿಫಲವಾಯಿತು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಭಿಷೇಕ್ ಪೊರಲ್ (49), ಕೆಎಲ್ ರಾಹುಲ್ (38), ಟ್ರಿಸ್ಟನ್ ಸ್ಟಬ್ಸ್ (34), ನಾಯಕ ಅಕ್ಸರ್ ಪಟೇಲ್ (34) ಮತ್ತು ಅಶುತೋಷ್ ಶರ್ಮ (ಅಜೇಯ 15) ತಂಡವನ್ನು ಉತ್ತಮ ಮೊತ್ತದತ್ತ ಮುನ್ನಡೆಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment