Thursday, December 25, 2025
Google search engine
Homeರಾಜ್ಯರಾಜ್ಯದ ಹಲವೆಡೆ ಏಪ್ರಿಲ್ 22ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ ಏಪ್ರಿಲ್ 22ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಸುರಿಯುತ್ತಿರುವ ಮಳೆ ಇಂದು ಕೂಡ ಮುಂದುವರೆಯಲಿದ್ದು, ರಾಜ್ಯದ ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ವಾಯುಭಾರ ಕುಸಿತವು ಸದ್ಯ ಉತ್ತರ ಮಧ್ಯ ಮಹಾರಾಷ್ಟ್ರದಿಂದ ಮರಾಠವಾಡ, ಕರ್ನಾಟಕದ ಒಳಭಾಗ, ರಾಯಲಸೀಮಾ, ತಮಿಳುನಾಡಿನ ಮನ್ನಾ‌ರ್ ಕೊಲ್ಲಿಯವರೆಗೆ ಸರಾಸರಿ ಸಮುದ್ರ ಮಟ್ಟದಿಂದ 0.9ಕಿ.ಮೀ ಎತ್ತರದಲ್ಲಿ ಸಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಲವಾದ ಗಾಳಿಯೊಂದಿಗೆ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 32 ಸೆ. ಮತ್ತು 23°ಸೆ ಆಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಯಾದಗಿರಿ, ಬೀದರ್, ಕಲಬುರಗಿ, ಗದಗ, ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಲಿದೆ.

ಏ. 21ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು,ಯಾದಗಿರಿ ಜಿಲ್ಲೆಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಶಿವಮೊಗ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರ ಮಳೆ/ಬಿರುಗಾಳಿ ಮಳೆ ಬೀಳುವ ಸಾಧ್ಯತೆ ಇದೆ.

ಏ.22 ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ. ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಶಿವಮೊಗ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಹಗುರ ಮಳೆ/ಬಿರುಗಾಳಿ ಮಳೆ ಸಾಧ್ಯತೆ ಇದೆ.

ಏ. 23ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments