ಬೆಂಗಳೂರು: ಮಂಗಳಮುಖಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೆ.ಆರ್.ಪುರಂನ ಬಸವೇಶ್ವರನಗರದ ಗಾಯತ್ರಿ ಲೇಔಟ್‌ನಲ್ಲಿ ನಡೆದಿದೆ.
ಗಾಯತ್ರಿ ಲೇಔಟ್‌ನ ಮಂಗಳಮುಖಿ ತನುಶ್ರೀ (40) ಕೊಲೆಯಾದವರು. ಮೂರು ತಿಂಗಳ ಹಿಂದೆ ಜಗನ್ನಾಥ್ ಎಂಬುವರ ಜೊತೆ ತನುಶ್ರೀ ವಿವಾಹವಾಗಿತ್ತು. ಮೂರು ದಿನಗಳ ಹಿಂದೆ ಹಣ ಮತ್ತು ಚಿನ್ನಾಭರಣಕ್ಕಾಗಿ ತನುಶ್ರೀಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.
ಕೋಟ್ಯಾಂತರ ಹಣವನ್ನು ಸಂಪಾದಿಸಿ ಕನ್ನಡಪರ ಸಂಘಟನೆಗಳ ಮೂಲಕ ನಾಡಿನ ಸೇವೆಗೆ ಹೋರಾಡುತ್ತಿದ್ದ ಮಂಗಳಮುಖಿ ತನುಶ್ರೀ, ಮದುವೆ ಮಾಡಿಕೊಂಡು ಮೂರು ತಿಂಗಳಿಗೆ ಕೊಲೆ ಆಗಿದ್ದಾರೆ.
ಮೂರು ತಿಂಗಳ ಹಿಂದಷ್ಟೇ ಜಗನ್ನಾಥ್ ಎಂಬುವರ ಜೊತೆ ತನುಶ್ರೀ ವಿವಾಹವಾಗಿದ್ದು, ಹಣ ಮತ್ತು ಚಿನ್ನಾಭರಣಕ್ಕಾಗಿ ತನುಶ್ರೀಯನ್ನು ಮೂರು ದಿನಗಳ ಹಿಂದೆ ಕೆ.ಆರ್.ಪುರದ ಬಸವೇಶ್ವರ ನಗರದ ಗಾಯಿತ್ರಿ ಲೇಔಟ್‌ನ ಮನೆಯಲ್ಲಿ ಮಾರಕಾಸ್ತ್ರದಿಂದ ಇರಿದು ಬರ್ಬರ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.
ಮಂಗಳಮುಖಿ ತನುಶ್ರೀ ಕಳೆದ ಮೂರು ದಿನಗಳ ಹಿಂದೆಯೇ ಕೊಲೆ ಆಗಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕೃತ್ಯದ ಬಳಿಕ ಪತಿ ಜಗನ್ನಾಥ್ ಹಾಗೂ ಮನೆಗೆಲಸದಾಕೆ ಇಬ್ಬರೂ ಪರಾರಿ ಆಗಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತೆ ಆಗಿದ್ದರು. ಹಾಗೇ ಸಂಗಮ ಎನ್ ಜಿಓ ನಡೆಸುತ್ತಿದ್ದ ತನುಶ್ರೀ ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಆಸ್ತಿವಂತೆ ಎಂಬುದನ್ನು ನೋಡಿದ್ದ ಜಗನ್ನಾಥ್ ಮದುವೆ ಮಾಡಿಕೊಂಡು 3 ತಿಂಗಳು ಜೊತೆಯಲ್ಲಿದ್ದು, ಇದೀಗ ಹಣಕ್ಕಾಗಿ ಕೊಲೆ ಬೆನ್ನಲ್ಲಿಯೇ ಪರಾರಿ ಆಗಿದ್ದಾನೆ ಎನ್ನುವ ಶಂಕೆ ವ್ಯಕ್ತವಾಗಿದೆ.
ಈ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೆ.ಆರ್.ಪುರಂ ಠಾಣೆಯ ಪೋಲಿಸರು ಪರಿಶೀಲನೆ ಮಾಡಿದ್ದಾರೆ. ಇನ್ನು ನೂರಾರು ಮಂಗಳಮುಖಿಯರು ಜಮಾವಣೆಗೊಂಡಿದ್ದು, ಮಂಗಳಮುಖಿಯರಿಗೆ ನಾಯಕಿಯಂತಿದ್ದ ತನುಶ್ರೀಯನ್ನು ಕಳೆದುಕೊಂಡು ದುಃಖಿತರಾಗಿದ್ದಾರೆ. ನಾಪತ್ತೆಯಾಗಿರುವ ಪತಿ ಜಗನ್ನಾಥ್ ಹಾಗೂ ತನುಶ್ರೀ ಮನೆಯ ಕೆಲಸದಾಕೆ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.



