Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

ಕೊಹ್ಲಿ, ದೇವದತ್ ಮಿಂಚಿನಾಟ: `ರಾಜಸ್ಥಾನ್ ಗೆ 206 ರನ್ ಗುರಿ ಒಡ್ಡಿದ ಆರ್ ಸಿಬಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 27 ವೀಕ್ಷಣೆಗಳು
rcb

ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕಲ್ ಅವರ ಅರ್ಧಶತಕ ಸೇರಿದಂತೆ ಬ್ಯಾಟ್ಸ್ ಮನ್ ಗಳ ಭರ್ಜರಿ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 205 ರನ್ ಗಳ ಕಠಿಣ ಗುರಿಯನ್ನು ರಾಜಸ್ಥಾನ್ ರಾಯಲ್ಸ್ ಗೆ ಒಡ್ಡಿದೆ.

ಬೆಂಗಳೂರಿನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಆರ್ ಸಿಬಿ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 205 ರನ್ ಸಂಪಾದಿಸಿತು. ಇದು ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಆರ್ ಸಿಬಿ ಮೊದಲ ಬಾರಿ 200ಕ್ಕಿಂತ ಅಧಿಕ ರನ್ ಗಳಿಸಿದ ಸಾಧನೆ ಮಾಡಿತು.

ವಿರಾಟ್ ಕೊಹ್ಲಿ ಇದೇ ಮೊದಲ ಬಾರಿ ಅರ್ಧಶತಕ ದಾಖಲಿಸಿದ್ದೂ ಅಲ್ಲದೇ ಎರಡು ಮಹತ್ವದ ಅರ್ಧಶತಕಗಳ ಜೊತೆಯಾಟ ನಿಭಾಯಿಸಿ ತಂಡ ಬೃಹತ್ ಮೊತ್ತ ಪೇರಿಸಲು ನೆರವಾದರು. ಈ ಮೂಲಕ ಆರ್ ಸಿಬಿ 32 ಬಾರಿ 200ಕ್ಕಿಂತ ಅಧಿಕ ಮೊತ್ತ ದಾಖಲಿಸಿದ ಎರಡನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸಿಎಸ್ ಕೆ 33 ಬಾರಿ ಈ ಸಾಧನೆ ಮಾಡಿ ಮೊದಲ ಸ್ಥಾನದಲ್ಲಿದೆ.

ಕೊಹ್ಲಿ ಮತ್ತು ಸಾಲ್ಟ್ ಮೊದಲ ವಿಕೆಟ್ ಗೆ 61 ರನ್ ಜೊತೆಯಾಟದಿಂದ ಪವರ್ ಪ್ಲೇನಲ್ಲಿ ರನ್ ಹೊಳೆ ಹರಿಸಿದರು. ಸಾಲ್ಟ್ (26) ಬೇಗನೇ ನಿರ್ಗಮಿಸಿದರೆ, ನಂತರ ದೇವದತ್ ಪಡಿಕಲ್ ಮತ್ತು ಕೊಹ್ಲಿ ಎರಡನೇ ವಿಕೆಟ್ ಗೆ 95 ರನ್ ಜೊತೆಯಾಟದಿಂದ ತಂಡ ಬೃಹತ್ ಮೊತ್ತ ದಾಖಲಿಸಲು ನೆರವಾದರು.

ಕೊಹ್ಲಿ 32 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದೂ ಅಲ್ಲದೇ 42 ಎಸೆತಗಳಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 70 ರನ್ ಬಾರಿಸಿ ಔಟಾದರು. ಪಡಿಕಲ್ 27 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ಸೇರಿದಂತೆ 50 ರನ್ ಬಾರಿಸಿ ಔಟಾದರು.

ಕೊನೆಯ ಹಂತದಲ್ಲಿ ಟಿಮ್ ಡೇವಿಡ್ ಮತ್ತು ಜಿತೇಶ್ ಕುಮಾರ್ 42 ರನ್ ಜೊತೆಯಾಟ ನಿಭಾಯಿಸಿದರು. ಟಿಮ್ ಡೇವಿಡ್ 15 ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್ ನೊಂದಿಗೆ 23 ರನ್ ಗಳಿಸಿದರೆ, ಜಿತೇಶ್ 10 ಎಸೆತಗಳಲ್ಲಿ 4 ಬೌಂಡರಿಯೊಂದಿಗೆ 20 ರನ್ ಬಾರಿಸಿ ತಂಡದ ಮೊತ್ತ 200ರ ಗಡಿ ದಾಟುವಂತೆ ನೋಡಿಕೊಂಡರು.

ರಾಜಸ್ಥಾನ್ ಪರ ಜೋಫ್ರಾ ಆರ್ಚರ್ ಪರಿಣಾಮಕಾರಿ ದಾಳಿ ನಡೆಸಿ 1 ವಿಕೆಟ್ ಪಡೆದರೆ, ಸಂದೀಪ್ ಶರ್ಮ ದುಬಾರಿ ಆದರೂ 2 ವಿಕೆಟ್ ಗಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment