Saturday, May 30, 2026
Google search engine
Homeತಾಜಾ ಸುದ್ದಿಬೆಂಗಳೂರಿನ ವಿಮಾನ ತುರ್ತು ಭೂಸ್ಪರ್ಶ: 175 ಪ್ರಯಾಣಿಕರು ಪಾರು

ಬೆಂಗಳೂರಿನ ವಿಮಾನ ತುರ್ತು ಭೂಸ್ಪರ್ಶ: 175 ಪ್ರಯಾಣಿಕರು ಪಾರು

ಬೆಂಗಳೂರಿನ ವಿಮಾನ ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, 175 ಪ್ರಯಾಣಿಕರು ಪಾರಾಗಿದ್ದಾರೆ.

ಏರ್ ಇಂಡಿಯಾ ವಿಮಾನ ಎಐ 807 ಶುಕ್ರವಾರ ಸಂಜೆ 6 ಗಂಟೆಗೆ ದೆಹಲಿ ವಿಮಾನ ನಿಲ್ದಾಣದಿಂದ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಮರಳಿ ವಿಮಾನ ನಿಲ್ದಾಣದಲ್ಲೇ ತುರ್ತು ಭೂಸ್ಪರ್ಶ ಮಾಡಿದೆ.

ದೆಹಲಿಯಿಂದ ವಿಮಾನ ಹೊರಟ ಕೆಲವೇ ಕ್ಷಣಗಳಲ್ಲಿ ವಿಮಾನದ ಏರ್ ಕಂಡಿಷನ್ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 6.38ಕ್ಕೆ ಮರಳಿ ಬಂದಿದ್ದು, ತುರ್ತು ಭೂಸ್ಪರ್ಶ ಮಾಡಿದೆ. ಪ್ರಯಾಣಿಕರಿಗೆ ಯಾವುದೇ ಅನಾಹುತ ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನದಲ್ಲಿ ಪ್ರಯಾಣಿಕರು ಹಾಗೂ ಸಿಬ್ಬಂದಿ ಸೇರಿದಂತೆ 180 ಮಂದಿ ಪ್ರಯಾಣಿಸುತ್ತಿದ್ದರು. ವಿಮಾನದ ಮೂಗು ಹಾಗೂ ಟಯರ್ ಹಾನಿಯಾಗಿದ್ದು, ಪ್ರಯಾಣಿಕರಿಗೆ ಯಾವುದೇ ಗಾಯದ ವರದಿಯಾಗಿಲ್ಲ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments