ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗುವಂತೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ಸಂಪರ್ಕಿಸಿದೆ.
42 ವರ್ಷದ ಗೌತಮ್ ಗಂಭೀರ್ ಐಪಿಎಲ್ ಟಿ-20 ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಭಾರತ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿರುವ ರಾಹುಲ್ ದ್ರಾವಿಡ್ ಅವರ ಗುತ್ತಿಗೆ ಒಪ್ಪಂದ ಟಿ-20 ವಿಶ್ವಕಪ್ ಟೂರ್ನಿ ನಂತರ ಅಂದರೆ ಜೂನ್ ಅಂತ್ಯಕ್ಕೆ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಕೋಚ್ ಸ್ಥಾನಕ್ಕೆ ಬಿಸಿಸಿಐ ಅರ್ಜಿ ಆಹ್ವಾನಿಸಿದೆ.
ಐಪಿಎಲ್ ಫೈನಲ್ ಮುಗಿದ ಮಾರನೇ ದಿನ ಅಂದರೆ ಮೇ 27ರಂದು ಭಾರತ ತಂಡದ ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕೋಚ್ ಆಗಿ ಮುಂದುವರಿಯಲು ದ್ರಾವಿಡ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಸಿಸಿಐ ನೂತನ ಕೋಚ್ ಗಾಗಿ ಹುಡುಕಾಟ ಆರಂಭಿಸಿದೆ.