Friday, 30 October 2026 — Kannadavahini
BREAKING NEWS
ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ
ಬೆಂಗಳೂರು

ಬಿಬಿಎಂಪಿ ವಿಸರ್ಜನೆ: ಇಂದಿನಿಂದ ಗ್ರೇಟರ್ ಬೆಂಗಳೂರು ಜಾರಿಗೆ ರಾಜ್ಯ ಸರ್ಕಾರ ಆದೇಶ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 5 ವೀಕ್ಷಣೆಗಳು
BBMP
BBMP

ಬೆಂಗಳೂರು: ನಗರ ಪಾಲಿಕೆ, ಮಹಾನಗರ ಪಾಲಿಕೆ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಾಗಿದ್ದ ಉದ್ಯಾನನಗರಿ ಬೆಂಗಳೂರು ಗುರುವಾರದಿಂದ ಗ್ರೇಟರ್‌ ಬೆಂಗಳೂರಾಗಿ ಬದಲಾಗುತ್ತಿದೆ. ಬಿಬಿಎಂಪಿಯಾಗಿದ್ದ ಬೆಂಗಳೂರನ್ನು ಗ್ರೇಟರ್‌ ಬೆಂಗಳೂರನ್ನಾಗಿ ಪರಿವರ್ತನೆ ಮಾಡಿರುವ ಆದೇಶ ಹೊರ ಬಿದ್ದಿದ್ದು, ಆದೇಶದಲ್ಲಿ ಗುರುವಾರದಿಂದಲೇ ಗ್ರೇಟರ್‌ ಬೆಂಗಳೂರು (ಜಿಬಿಎ) ಆಡಳಿತ ಜಾರಿಗೆ ಬರುತ್ತಿದೆ.

ಸರ್ಕಾರ ಹೊರಡಿಸಿರುವ ಈ ಆದೇಶದ ಪ್ರತಿಯಂತೆ ಗ್ರೇಟರ್‌ ಬೆಂಗಳೂರು ಆಡಳಿತ ಅಧಿನಿಯಮ, 2024 (2025ರ ಕರ್ನಾಟಕ ಅಧಿನಿಯಮ ಸಂಖ್ಯೆ (36) ರ ಒಂದನೇ ಪ್ರಕರಣದ (3) ನೇ ಉಪ ಪ್ರಕರಣದಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವೂ ಈ ಮೂಲಕ ಸದರಿ ಅಧಿನಿಯಮವನ್ನು ಎಲ್ಲಾ ಪ್ರಕರಣಗಳು ಹಾಗೂ ಉಪಬಂಧಗಳು ನಾಳೆಯಿಂದ 15.-05-2025 ರಿಂದ ಜಾರಿಗೆ ಬರತಕ್ಕದೆಂದು ಗೊತ್ತುಪಡಿಸಿದೆ ಎಂದು ತಿಳಿಸಲಾಗಿದೆ.

ರಾಜ್ಯಪಾಲರು ಅನುಮೋದಿಸಿರುವ ಈ ಆದೇಶವನ್ನು ನಗರಾಭಿವೃದ್ಧಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಅಧಿಸೂಚನೆ ಹೊರಡಿಸಿದ್ದಾರೆ.ನಾಳೆಯಿಂದ ಜಾರಿಗೆ ಬರಲಿರುವ ಜಿಬಿಎ ಅಡಳಿತ ಕುರಿತ ಮಾಹಿತಿಯನ್ನು ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೂ ರವಾನೆ ಮಾಡಲಾಗಿದೆ.

ಬಿಬಿಎಂಪಿಯನ್ನು ಏಕಾಏಕಿ ಗ್ರೇಟರ್‌ ಬೆಂಗಳೂರನ್ನಾಗಿ ಮಾರ್ಪಾಡು ಮಾಡಿರುವ ಸರ್ಕಾರದ ಆದೇಶಕ್ಕೆ ಕೆಲ ಬಿಬಿಎಂಪಿ ಹಿರಿಯ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಏಕಾಏಕಿ ಬಿಬಿಎಂಪಿಯನ್ನು ಜಿಬಿಎ ಮಾಡಿ ಮಾರ್ಪಾಡು ಮಾಡಿ ಹೊಸ ಬೆಂಗಳೂರು ಕಾಯ್ದೆ ಜಾರಿಗೆ ತಂದಿರುವುದರಿಂದ ನಾವೆಲ್ಲಾ ನಾಳೆಯಿಂದ ಯಾವ ಕಾಯ್ದೆ ಪ್ರಕಾರ ಕರ್ತವ್ಯ ನಿರ್ವಹಿಸಬೇಕು ಎಂದು ಗೊಂದಲದಲ್ಲಿದ್ದೇವೆ ಎಂದು ಅಲವತ್ತುಕೊಂಡಿದ್ದಾರೆ.

ಗುರುವಾರದಿಂದ ಜಾರಿಗೆ ಬರಲಿರುವ ಜಿಬಿಎ ಗೆ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿರುತ್ತಾರೆ. ಡಿಸಿಎಂ ಅವರು ಉಪಾಧ್ಯಕ್ಷರಾಗಲಿದ್ದು ಬಿಬಿಎಂಪಿ ಆಡಳಿತಾಧಿಕಾರಿಯಾಗಿರುವ ಹಿರಿಯ ಐಎಎಸ್‌‍ ಅಧಿಕಾರಿ ತುಷಾರ್‌ ಗಿರಿನಾಥ್‌ ಅವರು ಜಿಬಿಎ ಮುಖ್ಯ ಕಾರ್ಯನಿರ್ವಾಹಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಬಿಬಿಎಂಪಿ ರಚನೆಯಾದ ಮೇಲೆ ಬಿಬಿಎಂಪಿ ಆಯುಕ್ತರನ್ನು ಮುಖ್ಯ ಆಯುಕ್ತರನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿತ್ತು. ಇದೀಗ ಬಿಬಿಎಂಪಿ ಆಡಳಿತಾವಾಧಿ ಇಂದಿಗೆ ಕೊನೆಗೊಳ್ಳುತ್ತಿರುವುದರಿಂದ ಹೊಸದಾಗಿ ಮುಖ್ಯ ಆಯುಕ್ತರಾಗಿ ನಿಯೋಜನೆಗೊಂಡಿರುವ ಮಹೇಶ್ವರ್‌ ರಾವ್‌ ಅವರ ಕಥೆ ಏನಾಗಲಿದೆ ಎಂದು ಇನ್ನು ಗೊತ್ತಾಗಿಲ್ಲ.

ಮೂರು ಪಾಲಿಕೆ ರಚನೆ:

ಜಿಬಿಎ ಅಸ್ಥಿತ್ವಕ್ಕೆ ಬರುತ್ತಿರುವುದರಿಂದ ಭವಿಷ್ಯದಲ್ಲಿ ಬೆಂಗಳೂರನ್ನು ಮೂರು ಪಾಲಿಕೆಗಳನ್ನಾಗಿ ವಿಭಜಿಸಿ ಒಂದೊಂದು ಪಾಲಿಕೆಗೆ ಒಬ್ಬೊಬ್ಬ ಐಎಎಸ್‌‍ ಅಧಿಕಾರಿಗಳನ್ನು ಆಯುಕ್ತರನ್ನಾಗಿ ನೇಮಕ ಮಾಡುವ ಸಾಧ್ಯತೆಗಳಿವೆ. 125 ರಿಂದ 150 ವಾರ್ಡ್‌ಗಳನ್ನು ಒಳಗೊಂಡ ಮೂರು ಪಾಲಿಕೆಗಳನ್ನು ರಚನೆ ಮಾಡಿ ಚುನಾವಣೆ ನಡೆಸುವುದು ಸರ್ಕಾರದ ಉದ್ದೇಶವಾಗಿದೆ. ಈ ಪಾಲಿಕೆಗಳಿಗೆ ಜನಪ್ರತಿನಿಧಿಗಳು ಆಯ್ಕೆಯಾದರೂ ಅವರು ತಮ ವ್ಯಾಪ್ತಿಯಲ್ಲಿ ಕೈಗೊಳ್ಳುವ ಯಾವುದೇ ಯೋಜನೆಗಳಿಗೆ ಜಿಬಿಎ ಅನುಮತಿ ಪಡೆದುಕೊಳ್ಳುವುದು ಅನಿವಾರ್ಯವಾಗಲಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8396 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment