Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ರಾಜ್ಯಕ್ಕೆ ಎಲೆಕ್ಟ್ರಿಕ್ ಬಸ್ ಪೂರೈಕೆಗೆ ಕ್ರಮ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 32 ವೀಕ್ಷಣೆಗಳು
hd kumarswamy

ಕೇಂದ್ರ ಸರಕಾರದ PM E-ಡ್ರೈವ್ ಯೋಜನೆಯಡಿ ಎಲೆಕ್ಟ್ರಿಕ್ ಬಸ್‌ಗಳ ಹಂಚಿಕೆ ಮಾಡುವುದಾಗಿ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ನಗರ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಪಡಿಸುವ ಅಗತ್ಯವನ್ನು ಉಲ್ಲೇಖಿಸಿ ಕರ್ನಾಟಕದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಸಲ್ಲಿರುವ ಮನವಿಗೆ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ನವದೆಹಲಿಯ ಸಚಿವಾಲಯದಲ್ಲಿ ಶುಕ್ರವಾರ ತಮ್ಮನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ ಜತೆ ಕುಮಾರಸ್ವಾಮಿ ಅವರು ರಾಜ್ಯದ ನಗರ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಮಾತುಕತೆ ನಡೆಸಿದರು.

ಕರ್ನಾಟಕ ಸರಕಾರಕ್ಕೆ ಕೇಂದ್ರದಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ ಸಚಿವ ಕುಮಾರಸ್ವಾಮಿ ಅವರು; ವಿದ್ಯುತ್‌ ಚಾಲಿತ ಬಸ್ಸುಗಳ ಹಂಚಿಕೆ ಪ್ರಕ್ರಿಯೆ ಈಗಾಗಲೇ ನಡೆಯುತ್ತಿದೆ ಮತ್ತು ಕರ್ನಾಟಕಕ್ಕೆ ಹಂತಹಂತವಾಗಿ ಮತ್ತು ಆದ್ಯತೆಯ ಮೇರೆಗೆ ವಿದ್ಯುತ್ ಚಾಲಿತ ಬಸ್ಸುಗಳನ್ನು ಹಂಚಿಕೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಕರ್ನಾಟಕಕ್ಕೆ ಕೇಂದ್ರ ಸರಕಾರದಿಂದ ಸೂಕ್ತ ಬೆಂಬಲ ಸಿಗುತ್ತದೆ ಎಂದು ನಾನು ಖಚಿತಪಡಿಸುತ್ತೇನೆ” ಎಂದು ರಾಮಲಿಂಗಾರೆಡ್ಡಿ ಅವರಿಗೆ ಸ್ಪಷ್ಟವಾಗಿ ತಿಳಿಸಿದ  ಕುಮಾರಸ್ವಾಮಿ ಅವರು; “ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ PM E-ಡ್ರೈವ್ ಯೋಜನೆ ಅತ್ಯಂತ ಯಶಸ್ವಿಯಾಗಿ ಮುಂದುವರಿಯುತ್ತಿದೆ. ಸಾರಿಗೆ ವ್ಯವಸ್ಥೆಯಲ್ಲಿ, ಅದರಲ್ಲಿಯೂ ನಗರ ಪ್ರದೇಶಗಳಲ್ಲಿ ವಾಹನಗಳು ಹೊರಸೂಸುವ ಮಾಲಿನ್ಯವನ್ನು ಶೂನ್ಯಮಟ್ಟಕ್ಕೆ ಇಳಿಸುವ ನಿಟ್ಟಿನಲ್ಲಿ ಕರ್ನಾಟಕವೂ ಸೇರಿ ಭಾರತದಾದ್ಯಂತ ವಿದ್ಯುತ್‌ ಚಾಲಿತ ಬಸ್ಸುಗಳ ಅಳವಡಿಕೆಗೆ ಕೇಂದ್ರ ಸರಕಾರವು ದೊಡ್ಡ ಪ್ರಮಾಣದಲ್ಲಿ ಪ್ರಯತ್ನ ಮಾಡುತ್ತಿದೆ . ಕರ್ನಾಟಕವು ಪಿಎಂ ಇ-ಡ್ರೈವ್ ಯೋಜನೆ ಅಡಿಯಲ್ಲಿ ಖಂಡಿತವಾಗಿಯೂ ಹೆಚ್ಚು ಬಸ್ಸುಗಳನ್ನು ಪಡೆಯುತ್ತದೆ ಎಂದು ತಿಳಿಸಿದರು.

PM E-ಡ್ರೈವ್ ಉಪಕ್ರಮದಡಿಯಲ್ಲಿ 9 ಪ್ರಮುಖ ನಗರಗಳಿಗೆ 14,000 ವಿದ್ಯುತ್‌ ಚಾಲಿತ ಬಸ್‌ಗಳನ್ನು ಹಂಚಿಕೆ ಮಾಡಲಾಗುವುದು. ಚಾರ್ಜಿಂಗ್ ಸ್ಟೇಷನ್‌ಗಳು, ಬಸ್ ಡಿಪೋಗಳು ಮತ್ತು ವಾಹನ ನಿರ್ವಹಣಾ ವ್ಯವಸ್ಥೆ ಸೇರಿದಂತೆ ಸಂಬಂಧಿತ ಮೂಲಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ  ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವಿನ ಚರ್ಚೆ ನಡೆಸುತ್ತಿವೆ. ಈಗಾಗಲೇ ಗುರುತಿಸಲಾದ ನಗರ ಸಮೂಹಗಳಲ್ಲಿ ಈ ಯೋಜನೆಯ ತ್ವರಿತ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಸಚಿವಾಲಾಯದ ಹಿರಿಯ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಕುಮಾರಸ್ವಾಮಿ ಹೇಳಿದರು.

ನಾವು ವಿದ್ಯುತ್‌ ಚಾಲಿತ ಬಸ್ಸುಗಳನ್ನು ವಿತರಿಸುತ್ತಿದ್ದೇವೆ ಎನ್ನುವುದಕ್ಕಿಂತ, ನಾವು ಭಾರತದ ಜನತೆಗೆ ಸ್ವಚ್ಛ, ಚುರುಕಾದ ಮತ್ತು ಹೆಚ್ಚು ಉತ್ತಮವಾದ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುತ್ತಿದ್ದೇವೆ” ಎಂದು ತಿಳಿಸಿದ ಕೇಂದ್ರ ಸಚಿವರು; ಬೆಂಗಳೂರು ನಗರ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಈ ನಿಟ್ಟಿನಲ್ಲಿ ನಗರದಲ್ಲಿ ಮಾಲಿನ್ಯರಹಿತ ಸಾರಿಗೆ ವ್ಯವಸ್ಥೆ ಕಲ್ಪಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಪ್ರಾರಂಭಿಸಲಾದ PM E-ಡ್ರೈವ್ ಉಪಕ್ರಮವು 14,028 ವಿದ್ಯುತ್‌ ಚಾಲಿತ ಬಸ್ಸುಗಳೊಂದಿಗೆ ನಗರಗಳಲ್ಲಿ ವಾಯುಮಾಲಿನ್ಯ ರಹಿತ ಸಾರಿಗೆ ವ್ಯವಸ್ಥೆ ಕಲ್ಪಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಗೆ ಕೇಂದ್ರ ಸರಕಾರದಿಂದ ಎರಡು ವರ್ಷಗಳ ಅವಧಿಯಲ್ಲಿ ₹10,900 ಕೋಟಿ ಮೊತ್ತವನ್ನು ವೆಚ್ಚ ಮಾಡಲಾಗುತ್ತಿದೆ. ಎಲ್ಲಾ ರಾಜ್ಯ ಸರಕಾರಗಳು ಮತ್ತು ಪಾಲುದಾರರ ಸಹಯೋಗದೊಂದಿಗೆ ಈ ಪರಿವರ್ತನಾಶೀಲ ಗುರಿಯನ್ನು ಪೂರೈಸಲು ಬೃಹತ್‌ ಕೈಗಾರಿಕಾ ಸಚಿವಾಲಯವು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment