Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಕ್ರೀಡೆ

ದೋಹಾ ಡೈಮಂಡ್ ಲೀಗ್: 90.23 ಮೀ. ಜಾವೆಲಿನ್ ಎಸೆದು ನೀರಜ್ ಚೋಪ್ರಾ ದಾಖಲೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 4 ವೀಕ್ಷಣೆಗಳು
neeraj chopra

ಭಾರತದ ಡಬಲ್ ಒಲಿಂಪಿಕ್ಸ್ ಪದಕ ವಿಜೇತ ನೀರಜ್ ಚೋಪ್ರಾ ದೋಹಾ ಡೈಮಂಡ್ ಲೀಗ್ ನಲ್ಲಿ 90.23 ಮೀ. ಜಾವೆಲಿನ್ ಎಸೆದು ಹೊಸ ವಿಕ್ರಮ ಸಾಧಿಸಿದ್ದಾರೆ.

ನೀರಜ್ ಚೋಪ್ರಾ ಶುಕ್ರವಾರ ನಡೆದ ದೋಹಾ ಡೈಮಂಡ್ ಲೀಗ್ ನಲ್ಲಿ 90.23 ಮೀ. ದೂರ ದಾಖಲಿಸುವ ಮೂಲಕ ವೃತ್ತಿಜೀವನದಲ್ಲಿ ಮೊದಲ ಬಾರಿ 90 ಮೀ. ಗಡಿ ದಾಟಿದ ಸಾಧನೆ ಮಾಡಿದ್ದಾರೆ. ಅಲ್ಲದೇ ಇಷ್ಟು ದೂರ ದಾಖಲಿಸಿದ ಮೊದಲ ಭಾರತೀಯ ಜಾವೆಲಿನ್ ಪಟು ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.

ನೀರಜ್ ಮೂರನೇ ಪ್ರಯತ್ನದಲ್ಲಿ 90 ಮೀ.ಗೂ ಅಧಿಕ ದೂರ ದಾಖಲಿಸುವ ಮೂಲಕ ಬಹುದಿನಗಳ ಕನಸು ನನಸು ಮಾಡಿಕೊಂಡರು. 3033ರಲ್ಲಿ ನಡೆದ ಸ್ಟಾಕ್ ಹೋಂ ಡೈಮಂಡ್ ಲೀಗ್ ನಲ್ಲಿ ನೀರಜ್ ಚೋಪ್ರಾ ಕೊನೆಯ ಬಾರಿ ಗರಿಷ್ಠ 89.94 ಮೀ. ದಾಖಲಿಸಿದರು. ಅದಾದ ನಂತರ ಹಲವಾರು ಬಾರಿ 90 ಮೀ. ಗಡಿ ಸಮೀಪ ಬಂದಿದ್ದರೂ ಅದನ್ನು ಮೀರುವ ಸಾಧನೆ ತೋರುವಲ್ಲಿ ವಿಫಲರಾಗಿದ್ದರು.

ಕಳೆದ ಬಾರಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕೂಡ 90ರ ಗಡಿ ದಾಟುವ ಉಮೇದು ಹೊಂದಿದ್ದರೂ ಅತಿಯಾದ ಆತ್ಮವಿಶ್ವಾಸದಿಂದ ಈ ಗುರಿ ಸಾಧಿಸಲು ಸಾಧ್ಯವಾಗಿರಲಿಲ್ಲ. ಆದರೂ ಬೆಳ್ಳಿ ಪದಕಕ್ಕೆ ತೃಪ್ತರಾಗಿದ್ದರು. ಪಾಕಿಸ್ತಾನದ ಸ್ಪರ್ಧಿ 90 ಮೀ. ಗಡಿ ದಾಟಿ ಚಿನ್ನದ ಪದಕ ಗೆದ್ದುಕೊಂಡಿದ್ದರು.

27 ವರ್ಷದ ನೀರಜ್ ಚೋಪ್ರಾ ಮೊದಲ ಎಸೆತದಲ್ಲೇ 88.44ಮೀ. ಎಸೆದು ಭರ್ಜರಿ ಆರಂಭ ಪಡೆದರು. ಈ ಮೂಲಕ ಟೊಕಿಯೋದಲ್ಲಿ ನಡೆಯಲಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಗೆ ಅರ್ಹತೆ ಗಿಟ್ಟಿಸಿದರು. ಈ ಟೂರ್ನಿಗೆ ಅರ್ಹತೆ ಪಡೆಯಲು 85 ಮೀ. ನಿಗದಿಪಡಿಸಲಾಗಿತ್ತು. ನೀರಜ್ ಎರಡನೇ ಎಸೆತದಲ್ಲಿ ಫೌಲ್ ಮಾಡಿದರು. ಆದರೆ ಮೂರನೇ ಎಸೆತದಲ್ಲಿ ಅಮೋಘ ಪ್ರದರ್ಶನ ನೀಡಿ 90ರ ಗಡಿ ದಾಟಿ ಇತಿಹಾಸ ಬರೆದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment