ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಸಮೀಪದಲ್ಲಿ ಸಂಭವಿಸಿದೆ.
ಹೊಳಲ್ಕರೆ ತಾಲೂಕಿನ ಅರೇಹಳ್ಳಿಯ ಉದ್ಯಮಿ ಯಶವಂತ್ ಅವರ ಪತ್ನಿ ಕಾವ್ಯಾ (30), ಅತ್ತೆ ಗಂಗಮ್ಮ (50) ಹಾಗೂ ಪುತ್ರಿಯರಾದ ಹನ್ಸಿಕಾ (4), ಮನಸ್ವಿ (2) ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಓರ್ವನ ಸ್ಥಿತಿ ಗಾಯಗೊಂಡು ಗಂಭೀರವಾಗಿದ್ದು, ಕೂಡಲೇ ಹೊಳಲ್ಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಟ್ರ್ಯಾಕ್ಟರ್ ಗೆ ರಿಫ್ಲೆಕ್ಟರ್ ಹಾಕದ ಕಾರಣ ಕತ್ತಲಲ್ಲಿ ಕಾರು ಚಾಲಕನಿಗೆ ಟ್ರ್ಯಾಕ್ಟರ್ ಇರುವುದು ತಿಳಿಯದೇ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ಕಾರಿನಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಚಿತ್ರಹಳ್ಳಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು, ಡಿವೈಎಸ್ಪಿ ದಿನಕರ್ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.



