Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ಅಪರಾಧ

ಕಲ್ಯಾಣ ಮಂಟಪಕ್ಕೆ ನುಗ್ಗಿ ವಧುವಿನ ಚಿನ್ನಕ್ಕೆ ಕದ್ದ ಹಾಕಿದ ಕಳ್ಳ ಸೆರೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 31 ವೀಕ್ಷಣೆಗಳು
arrest
arrest

ಬೆಂಗಳೂರು: ಕಲ್ಯಾಣ ಮಂಟಪಕ್ಕೆ ಬಂದು ನಕಲಿ ಕೀ ಬಳಿಸಿ ಮದುವೆ ಕಾರ್ಯದಲ್ಲಿದ್ದ ವಧುವಿನ ಕೊಠಡಿ ಪ್ರವೇಶಿಸಿ  ಚಿನ್ನಾಭರಣವನ್ನು ಕಳವು ಮಾಡಿ ಪರಾರಿಯಾಗಿದ್ದ ಅರೋಪಿಯನ್ನು ಬಂಧಿಸುವಲ್ಲಿ ನೆಲಮಂಗಲ ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ.

ದಾವಣಗೆರೆ ಮೂಲದ ಕಿರಣ್ ಅಲಿಯಾಸ್ ಚೌಲ್ಟ್ರಿ ಕಿರಣ್ (25) ಬಂಧಿತ ಆರೋಪಿ. ಕಳವು ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಕಳೆದ ಮೇ 14 ಮತ್ತು 15 ರಂದು ನಗರದ ಎಂವಿಎಂ ಕಲ್ಯಾಣ ಮಂಟಪದಲ್ಲಿ ಉದ್ಯಮಿ ವೆಂಕಟೇಶ್ ಅವರ ಮಗಳ ಮದುವೆ ಕಾರ್ಯ ನಡೆದಿತ್ತು. ಮದುವೆ ಸಮಾರಂಭದಲ್ಲಿ ತಮ್ಮನ ಮಗಳು ನಯನಾ ಬಂದಿದ್ದರು. ಮೇ 15ರ ಬೆಳಗ್ಗೆ 11 ಗಂಟೆ ಸಮಯದಲ್ಲಿ ನಯನಾ ಕಲ್ಯಾಣ ಮಂಟಪದಲ್ಲಿನ ವಧುವಿನ ಕೊಠಡಿಯಲ್ಲಿನ ಸೂಟ್ ಕೇಸ್​ನಲ್ಲಿ ಸಮಾರು 3.5 ಲಕ್ಷ ಮೌಲ್ಯದ 40 ಗ್ರಾಂ ತೂಕದ ಚಿನ್ನದ ಚೈನ್ ಇಟ್ಟು ಮದುವೆ ಕಾರ್ಯದಲ್ಲಿ ಬ್ಯೂಸಿಯಾಗಿದ್ದರು.

ಮದುವೆ ಮುಗಿದ ನಂತರ ಮನೆಗೆ ಬಂದು ಸೂಟ್ ಕೇಸ್ ಪರಿಶೀಲನೆ ಮಾಡಿದಾಗ ಚಿನ್ನದ ಚೈನ್ ಕಳವಾಗಿರುವುದು ಬೆಳಕಿಗೆ ಬಂದಿತ್ತು. ವೆಂಕಟೇಶ್‌ ಅವರು ಮೇ 15ರಂದು ಈ ಬಗ್ಗೆ ನೆಲಮಂಗಲ ಟೌನ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಟೌನ್ ಪೊಲೀಸರು ಮಂಟಪದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆರೋಪಿಯ ಸುಳಿವು ಸಿಕ್ಕಿದೆ. ನಕಲಿ ಕೀ ಬಳಸಿ ಹೆಣ್ಣಿನ ಕೊಠಡಿಗೆ ಹೋಗಿ ಬರುವ ದೃಶ್ಯ ಸಿಸಿ ಕ್ಯಾಮಾರದಲ್ಲಿ ಪತ್ತೆಯಾಗಿತ್ತು. ಮೇ 16 ರಂದು ಆರಕ್ಷಕ ನಿರೀಕ್ಷಕ ಭರತ್‌ ಗೌಡ ಮಾರ್ಗದರ್ಶನದಲ್ಲಿ ಅಪರಾಧ ವಿಭಾಗದ ಎಎಸ್‌ಐ ರಘು ನೇತೃತ್ವದಲ್ಲಿ ಪೊಲೀಸ್‌ ಸಿಬ್ಬಂದಿ ಮಿಂಚಿನ ಕಾರ್ಯಾಚರಣೆ ನಡೆಸಿ ದಾವಣಗೆರೆಯಲ್ಲಿ ಕುಖ್ಯಾತ ಕಳ್ಳ ಕಿರಣ್ ಅಲಿಯಾಸ್ ಚೌಲ್ಟ್ರಿ ಕಿರಣ್​ನನ್ನು ಬಂಧಿಸಿದೆ.

ಬಂಧಿತನಿಂದ 3.5 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದ್ದು, ಜಪ್ತಿ ಮಾಡಲಾದ 40 ಗ್ರಾಂ ತೂಕದ ಚಿನ್ನದ ಸರವನ್ನ ವಾರಸುದಾರರಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೋಜು ಮಸ್ತಿಗೆ ಕಳವು:

ಆರೋಪಿ ಕಿರಣ್‌ ಮೋಜು ಮಸ್ತಿಗಾಗಿ ಕಳ್ಳತನ ನಡೆಸುತ್ತಿರುವುದು ತನಿಖೆಯಿಂದ ತಿಳಿದುಬಂದಿದೆ. ಅಂದು ಕಲ್ಯಾಣ ಮಂಟಪದ ವಧುವಿನ ಕೊಠಡಿಯಲ್ಲಿಟ್ಟಿದ್ದ ಬೆಲೆ ಬಾಳುವ ಚಿನ್ನಾಭರಣಗಳನ್ನ ಕದ್ದು ಮಾರಾಟ ಮಾಡಿದ್ದ ಕಿರಣ್​, ಅದರಿಂದ ಬಂದ ಹಣದಲ್ಲಿ ಮೋಜು ಮಸ್ತಿ ಮಾಡಿದ್ದ.

ಕಲ್ಯಾಣ ಮಂಟಪಗಳಲ್ಲಿ ಕಳವು ಮಾಡುತ್ತಿದ್ದರಿಂದ ಈತನ ಹೆಸರು ಕಿರಣ್ ಅಲಿಯಾಸ್ ಚೌಲ್ಟ್ರಿ ಕಿರಣ್‌ ಎಂಬ ಕುಖ್ಯಾತಿಗೆ ಪಾತ್ರನಾಗಿದ್ದ. ಅಲ್ಲದೇ ಆರೋಪಿಯು ದಾವಣಗೆರೆ, ಹುಬ್ಬಳಿ ಸೇರಿದಂತೆ ವಿವಿಧ ಪೊಲೀಸ್ ಠಾಣೆಯಲ್ಲಿ ಕಳವು, ದರೋಡೆ, ಮನೆಕಳ್ಳತನ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment