Sunday, 8 November 2026 — Kannadavahini
BREAKING NEWS
ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ
ರಾಜ್ಯ

ಪಿಎಂಶ್ರೀ ಯೋಜನೆಯಡಿ 10,900 ಎಲೆಕ್ಟ್ರಿಕ್ ಬಸ್ ಪೂರೈಕೆ: ಬೆಂಗಳೂರಿಗೆ 4500 ಬಸ್: ಎಚ್.ಡಿ. ಕುಮಾರಸ್ವಾಮಿ ಘೋಷಣೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 19 ವೀಕ್ಷಣೆಗಳು
hd kumarswamy
hd kumarswamy

ನವದೆಹಲಿ: ಪಿಎಂ ಇ-ಡ್ರೈವ್ ಅಡಿಯಲ್ಲಿ ಮೊದಲ ಹಂತದಲ್ಲಿಯೇ ರಾಷ್ಟ್ರದ ಐದು ಪ್ರಮುಖ ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ.

ಈ ಪೈಕಿ ಬೆಂಗಳೂರು ನಗರಕ್ಕೆ 4500 ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಲಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿತಿಳಿಸಿದರು.

ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಎಲೆಕ್ಟ್ರಿಕ್ ಬಸ್ ಹಂಚಿಕೆಯ ಸಂಬಂಧ ಕರ್ನಾಟಕ, ತೆಲಂಗಾಣ, ಗುಜರಾತ್ ಹಾಗೂ ದೆಹಲಿ ರಾಜ್ಯಗಳ ಅಧಿಕಾರಿಗಳ ಜತೆ ಕೇಂದ್ರ ಸಚಿವರು ಸಭೆ ನಡೆಸಿದರು.

ಎಲೆಕ್ಟ್ರಿಕ್ ಬಸ್ ಗಳ ಬಳಕೆ ಹಾಗೂ ಅವುಗಳ ನಿರ್ವಹಣೆಗೆ ಅಗತ್ಯವಾದ ಪೂರಕ ಮೂಲಸೌಕರ್ಯವನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಚಿವರು; ಮಾಲಿನ್ಯರಹಿತ ಸಮೂಹ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವುದು ರಾಷ್ಟ್ರೀಯ ಅಗತ್ಯ ಎಂದು ಪ್ರತಿಪಾದಿಸಿದರು.

ಬಸ್ ಹಂಚಿಕೆಯಲ್ಲಿ ಬೇಡಿಕೆ, ಜನಸಂಖ್ಯೆ ಹಾಗೂ ಹಳೆಯ ಬಸ್ ಗಳ ವಿಲೇವಾರಿ ಅಂಶಗಳನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದರು.

ಕರ್ನಾಟಕಕ್ಕೆ 4500 ಬಸ್ ಹಂಚಿಕೆ:

ಕರ್ನಾಟಕದ ಪರವಾಗಿ ಸಭೆಯಲ್ಲಿ ಹಾಜರಿದ್ದ ಸರಿಗೆ ಇಲಾಖೆಯ ಕಾರ್ಯದರ್ಶಿ ಎನ್.ವಿ.ಪ್ರಸಾದ್ ಅವರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಾಗಿ (BMTC) 7,000 ಎಲೆಕ್ಟ್ರಿಕ್ ಬಸ್ ಗಳಿಗೆ ಬೇಡಿಕೆ ಸಲ್ಲಿಸಿದರು. ಕೆಲ ದಿನಗಳ ಹಿಂದೆ ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾಗಿದ್ದ ರಾಜ್ಯದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕೂಡ ಇಷ್ಟೇ ಸಂಖ್ಯೆಯ ಬಸ್ ಗಳಿಗೆ ಬೇಡಿಕೆ ಸಲ್ಲಿಸಿದರು.

ಈ ಬೇಡಿಕೆ ಹಾಗೂ ಜನಸಂಖ್ಯೆಯನ್ನು ಪರಿಗಣಿಸಿ ಮೊದಲ ಹಂತದಲ್ಲಿಯೇ ಬಿಎಂಟಿಸಿಗೆ 4,500 ಬಸ್ ಗಳನ್ನು ಒದಗಿಸುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದರು. ದೇಶದ ಇತರೆ ನಗರಗಳಿಗೆ ಹೋಲಿಸಿದರೆ ಬೆಂಗಳೂರು ನಗರಕ್ಕೆ ಅತ್ಯಧಿಕ ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆಯನ್ನು ಅವರು ನೀಡಿದರು.

ಉಳಿದಂತೆ ದೆಹಲಿ ಸಾರಿಗೆ ಸಂಸ್ಥೆ 2800 ಬಸ್ ಗಳಿಗೆ ಬೇಡಿಕೆ ಇಟ್ಟಿದ್ದು, ಅಷ್ಟೂ ಬಸ್ ಗಳನ್ನು ಒದಗಿಸುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದರು. ದೇಶದ ಇತರೆ ನಗರಗಳಿಗೆ ಹೋಲಿಸಿದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜನಸಂಖ್ಯೆ ಅಧಿಕವಾಗಿದೆ. ಜತೆಗೆ ಇನ್ನೂ ಕೆಲ ಅಂಶಗಳನ್ನು ಪರಿಗಣಿಸಿ ಬೇಡಿಕೆ ಇಟ್ಟಿರುವಷ್ಟೂ ಸಂಖ್ಯೆಯ ಬಸ್ ಗಳನ್ನು ಹಂಚಿಕೆ ಮಾಡುವಂತೆ ಕೇಂದ್ರ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಳಿದಂತೆ ಸೂರತ್ ನಗರ ಸಾರಿಗೆ ಸಂಸ್ಥೆ 600 ಬಸ್ ಗಳಿಗೆ ಬೇಡಿಕೆ ಇಟ್ಟಿದ್ದು, ಅಷ್ಟೂ ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಲಾಗಿದೆ. ಅಹಮದಾಬಾದ್ ನಗರಕ್ಕೆ 1000 ಬಸ್ ಗಳನ್ನು ಕೇಳಲಾಗಿದ್ದು, ಅಷ್ಟೂ ಬಸ್ ಗಳನ್ನೂ ಹಂಚಿಕೆ ಮಾಡುವುದಕ್ಕೆ ಸಚಿವರು ಒಪ್ಪಿಗೆ ನೀಡಿದರು.

ತೆಲಂಗಾಣದ ರಾಜಧಾನಿ ಹೈದರಾಬಾದ್ ನಗರ ಸಾರಿಗೆ ಸಂಸ್ಥೆ 2800 ವಿದ್ಯುತ್ ಚಾಲಿತ ಬಸ್ ಗಳಿಗೆ ಬೇಡಿಕೆ ಇಟ್ಟಿತ್ತು, ಆ ಪೈಕಿ 2000 ಬಸ್ ಗಳನ್ನು ಹಂಚಿಕೆ ಮಾಡುವ ಬಗ್ಗೆ ಸಚಿವರು ಭರವಸೆ ನೀಡಿದರು.

ಒಟ್ಟಾರೆಯಾಗಿ ಐದೂ ನಗರಗಳಿಂದ 14,200 ಬಸ್ ಗಳಿಗೆ ಬೇಡಿಕೆ ಬಂದಿತ್ತು. ಆ ಪೈಕಿ 10,900 ಬಸ್ ಗಳನ್ನು ಮೊದಲ ಹಂತದಲ್ಲಿ ಹಂಚಿಕೆ ಮಾಡಲಾಗುತ್ತಿದೆ ಎಂದ ಕೇಂದ್ರ ಸಚಿವರು; ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡುವ ಮುನ್ನ ಐದೂ ನಗರಗಳ ಸಾರಿಗೆ ಸಂಸ್ಥೆಗಳು ಡಿಪೋಗಳಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವುದು ಸೇರಿದಂತೆ ಅಗತ್ಯವಾದ ಮೂಲಸೌಕರ್ಯವನ್ನು ಸಿದ್ಧ ಮಾಡಿಟ್ಟುಕೊಳ್ಳಬೇಕು. ಈಗಾಗಲೇ ಅಸ್ತಿತ್ವದಲ್ಲಿರುವ ಡಿಪೋಗಳನ್ನು ಮೇಲ್ದರ್ಜೆಗೆ ಏರಿಸುವುದು ಹಾಗೂ ಅಗತ್ಯವಾದರೆ ಹೊಸ ಡಿಪೋಗಳನ್ನು ಸ್ಥಾಪಿಸುವ ಬಗ್ಗೆ ತ್ವರಿತಗತಿಯಲ್ಲಿ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8407 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment