Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಬೆಂಗಳೂರು

ರಾಜಕಾಲುವೆ ಮೇಲಿರುವ ಅಕ್ರಮ ಕಟ್ಟಡ ತೆರವು ಮಾಡುವ ದಮ್ಮು ತಾಕತ್ತು ಇದೆಯಾ?: ಹೆಚ್.ಡಿ. ಕುಮಾರಸ್ವಾಮಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 33 ವೀಕ್ಷಣೆಗಳು
hd kumarswamy
hd kumarswamy

ನವದೆಹಲಿ: ಡಿಸಿಎಂ ಡಿಕೆ ಶಿವಕುಮಾರ್ ಮಾನ್ಯತಾ ಟೆಕ್ ಪಾರ್ಕ್ ಬಳಿ ಭೇಟಿ ನೀಡಿದ್ದು ನೆರೆ ಮತ್ತು ಮಳೆ ಅನಾಹುತ ವೀಕ್ಷಿಸಲಿಕ್ಕಾ ಅಥವಾ ರಾಜಕಾಲುವೆ ಒತ್ತುವರಿದಾರನ್ನು ರಕ್ಷಣೆ ಮಾಡಲಿಕ್ಕಾ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ಕೊಟ್ಟು ಮಳೆ, ನೆರೆ ಪರಿಸ್ಥಿತಿ ವೀಕ್ಷಣೆ ಮಾಡಿರುವುದೇನೋ ಸರಿ. ಆದರೆ, ಅವರ ಭೇಟಿ ಪ್ರವಾಹ ವೀಕ್ಷಣೆಗೋ ಅಥವಾ ರಾಜಕಾಲುವೆ ರಕ್ಕಸರ ರಕ್ಷಣೆಗೋ..? ಈ ಬಗ್ಗೆ ಬೆಂಗಳೂರು ಮಹಾಜನತೆಗೆ ಬೆಂಗಳೂರು ಉಸ್ತುವಾರಿ ಸಚಿವರು ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಡಿಸಿಎಂ ಪಾದಸ್ಪರ್ಶ ಮಾಡಿದ್ದ ರಾಜಕಾಲುವೆ ಪುನೀತವಾಗಿರಬೇಕು. ಪಾಪ.. ಅದೇ ರಾಜಕಾಲುವೆ ಮೇಲೆ ಬೃಹದಾಕಾರವಾಗಿ ಎದ್ದು ನಿಂತಿರುವ ‘ಭಾರೀ ಆಸಾಮಿ’ಯೊಬ್ಬರ ಕಟ್ಟಡ ಅವರ ಕಣ್ಣಿಗೆ ಕಾಣಲಿಲ್ಲವೆ? ರಾಜಾರೋಷವಾಗಿ ರಾಜಕಾಲುವೆಯನ್ನು ಮುಕ್ಕಿ ತಿಂದಿರುವ ಆಸಾಮಿಯ ಬಗ್ಗೆ ಅವರು ಚಕಾರವನ್ನೇ ಎತ್ತಲಿಲ್ಲ. ಕೊನೆಪಕ್ಷ ಅವರ ಹೆಸರನ್ನೂ ಹೇಳಲಿಲ್ಲ ಎಂದು ಕುಮಾರಸ್ವಾಮಿ ಕಾಲೆಳೆದಿದ್ದಾರೆ.

ರಾಜಕಾಲುವೆಗಳ ಮೇಲೆ ಐಷಾರಾಮಿ ಸೌಧಗಳನ್ನು ಕಟ್ಟಿಕೊಂಡು ಕೋಟಿ ಕೋಟಿ ದುಡಿಯುತ್ತಿರುವ ರಾಜಕಾಲುವೆ ರಕ್ಕಸರ ವಿರುದ್ಧ ಕ್ರಮ ಜರುಗಿಸುವ ದಮ್ಮು ತಾಕತ್ತು ನಿಮಗೆ ಇದೆಯಾ ಡಿ.ಕೆ. ಶಿವಕುಮಾರ್ ರವರೇ? ಹೋಗಲಿ, ಅಂಥವರ ವಿರುದ್ಧ ಕ್ರಮ ಜರುಗಿಸಲು ನಿಮ್ಮ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ, ಅಧಿಕಾರ ನೀಡಿದ್ದೀರಾ? ಒಂದು ವೇಳೆ ನೀಡಿದ್ದರೆ ಆ ಅಕ್ರಮ ಕಟ್ಟಡಗಳು ಇನ್ನೂ ಯಾಕೆ ಹಾಗೆಯೇ ಇವೆ? ಎಂಬುದನ್ನು ನೀವು ಹೇಳಬೇಕಲ್ಲವೇ? ಎಂದು ಕೇಂದ್ರ ಸಚಿವರು ಕೇಳಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ನೀವು ಕುರ್ಚಿ ಮೇಲೆ ಕೂತು ಎರಡು ವರ್ಷವೇ ಆಯಿತು. ಅದೆಷ್ಟೋ ಬಾರಿ ಸಾಯಿ ಬಡಾವಣೆ ಮುಳುಗಿದ್ದೂ ಆಯಿತು, ತೇಲಿದ್ದೂ ಆಯಿತು! ನಿಮ್ಮಿಂದ ಆಗಲಿ ಅಥವಾ ಕಾಂಗ್ರೆಸ್ ಸರಕಾರದಿಂದ ಆಗಲಿ ಯಾವುದೇ ಪರಿಹಾರ ಸಿಗಲಿಲ್ಲ! ಬಡಾವಣೆಯ ಜನರು ನರಳುತ್ತಿರುವುದು ಮಾತ್ರ ತಪ್ಪಿಲ್ಲ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment