ಸಂಭ್ರಮಾಚರಣೆ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತಲಾ 10 ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಿದೆ.
ಕಾಲ್ತುಳಿತ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ್ದ ಆರ್ ಸಿಬಿ ಗುರುವಾರ ಮೃತ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರ ಚಿಕಿತ್ಸೆಗೆ ನೆರವು ಘೋಷಿಸಿದೆ.
ಎಕ್ಸ್ ಖಾತೆಯಲ್ಲಿ ಈ ವಿಷಯ ಪ್ರಕಟಿಸಿರುವ ಆರ್ ಸಿಬಿ ಕಾಲ್ತುಳಿತ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ್ದು, ಮೃತ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಹಣಕಾಸಿನ ನೆರವು ನೀಡಲಾಗುವುದು ಹಾಗೂ ಗಾಯಗೊಂಡವರ ಚಿಕಿತ್ಸೆ ಜವಾಬ್ದಾರಿ ವಹಿಸುತ್ತೇವೆ. ಆರ್ ಸಿಬಿ ಅಭಿಮಾನಿಗಳು ಯಾವತ್ತೂ ನಮ್ಮ ಹೃದಯದಲ್ಲಿ ಸ್ಥಾನ ಪಡೆದಿರುತ್ತಾರೆ ಎಂದು ಟ್ವೀಟ್ ಮಾಡಿದೆ.


