ಪುತ್ತೂರು ನಗರಸಭಾ ಬಿಜೆಪಿ ಸದಸ್ಯ ರಮೇಶ್ ರೈ ಅವರ ಶವ ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ಬಳಿಯ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬಳಿಯ ನೇತ್ರಾವತಿ ನದಿಯಲ್ಲಿ ಗುರುವಾರ ಸಂಜೆ ರಮೇಶ್ ರೈ ಅವರ ಶವಪತ್ತೆಯಾಗಿದೆ.
ಗುರುವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದ ರಮೇಶ್ ರೈ ಅವರಿಗಾಗಿ ಹುಡುಕಾಟ ನಡೆದಿದ್ದು, ಮಧ್ಯಾಹ್ನದ ವೇಳೆ ನೇತ್ರಾವತಿ ನದಿಯ ಪಿಲ್ಲರ್ ಬಳಿ ಮೊಬೈಲ್ ಹಾಗೂ ಪರ್ಸ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ನದಿಯಲ್ಲಿ ಹುಡುಕಾಟ ನಡೆಸಿದ್ದರು.
ಇತ್ತೀಚೆಗಷ್ಟೇ ಬಿಜೆಪಿಯಿಂದ ಸ್ಪರ್ಧಿಸಿ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದ ರಮೇಶ್ ರೈ ಆತ್ಮಹತ್ಯೆಯೋ ಕೊಲೆಯೋ ಎಂಬುದು ನಿಗೂಢವಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


