Monday, May 25, 2026
Google search engine
Homeಕ್ರೀಡೆಬೆಂಗಳೂರು ಕಾಲ್ತುಳಿತ ದುರಂತ: ಆರ್ ಸಿಬಿ ಅಧಿಕಾರಿ ಸೇರಿ ನಾಲ್ವರ ಬಂಧನ

ಬೆಂಗಳೂರು ಕಾಲ್ತುಳಿತ ದುರಂತ: ಆರ್ ಸಿಬಿ ಅಧಿಕಾರಿ ಸೇರಿ ನಾಲ್ವರ ಬಂಧನ

ಬೆಂಗಳೂರಿನಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ದುರಂತದ ಹಿನ್ನೆಲೆಯಲ್ಲಿ ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

ನಗರದ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ, ಡಿಎನ್​ಎ ಮ್ಯಾನೇಜ್​ಮೆಂಟ್​​ ಸಿಬ್ಬಂದಿ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್​ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

ನಾಲ್ವರು ಆರೋಪಿಗಳನ್ನು ವೈದ್ಯಕೀಯ ತಪಾಸಣೆ ನಂತರ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಶೇಷಾದ್ರಿಪುರಂ ಎಸಿಪಿ ಪ್ರಕಾಶ್ ವಿಚಾರಣೆ ನಡೆಸಿದ್ದಾರೆ.

ಬೆಂಗಳೂರಿನ ವಿಧಾನ ಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂವರೆಗೂ ವಿಕ್ಟರಿ ಪರೇಡ್ ಅಂತ ಪೊಲೀಸರು ಅನುಮತಿ ನಿರಾಕರಿಸಿದ ನಂತರವು ಸೊಶೀಯಲ್​ ಮೀಡಿಯಾದಲ್ಲಿ ಪೋಸ್ಟ್ ಮಾಡಿ ನಂತರ ಡಿಲೀಟ್ ಮಾಡಿರುವುದು, ಸ್ಟೇಡಿಯಂನಲ್ಲಿ ಸೆಲೆಬ್ರೇಷನ್​ಗೆ ಉಚಿತ ಟಿಕೆಟ್ ಅಂತ ಘೋಷಿಸಿರುವುದು ಸೇರಿದಂತೆ ವಿವಿಧ ಆರೋಪಗಳಡಿ ಅವರನ್ನು ಬಂಧಿಸಲಾಗಿದೆ.

ಇದೇ ವೇಳೆ ತನಿಖೆ ನಡೆಸದೇ ಪತಿಯನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತನಿಖೆ ನಡೆಸುವ ಮುನ್ನವೇ ಸಿಎಂ ಆದೇಶದ ಮೇರೆಗೆ ಏಕಾಏಕಿ ಪತಿಯನ್ನು ಬಂಧಿಸಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments