ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಆರ್ ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲಾಗಿದೆ.
ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ನೈಜ ಹೋರಾಟಗಾರರ ವೇದಿಕೆ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲಿಸಿದ್ದಾರೆ.
ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿ ಈಗಾಗಲೇ ಆರ್ ಸಿಬಿ, ಕೆಎಸ್ ಸಿಎ ವಿರುದ್ಧ ದೂರು ದಾಖಲಾಗಿದ್ದು, ಈ ಸಂಬಂಧ ಆರ್ ಸಿಬಿಯ ನಾಲ್ವರನ್ನು ಬಂಧಿಸಲಾಗಿದೆ.
ಆರ್ ಸಿಬಿ ನಂತರ ಇದೀಗ ತಂಡದ ಪ್ರಮುಖ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲಾಗಿದ್ದು, ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣ ಸ್ವೀಕರಿಸಲಾಗುವುದು ಎಂದು ಹಿಂಬರಹದಲ್ಲಿ ಬರೆದುಕೊಟ್ಟಿದ್ದಾರೆ.



