Saturday, May 30, 2026
Google search engine
Homeವಿದೇಶಇರಾನ್ ಮೇಲೆ ಭೀಕರ ದಾಳಿ: ಇಸ್ರೇಲ್ ಮೇಲೆ 100 ಡ್ರೋಣ್ ಪ್ರತಿದಾಳಿ!

ಇರಾನ್ ಮೇಲೆ ಭೀಕರ ದಾಳಿ: ಇಸ್ರೇಲ್ ಮೇಲೆ 100 ಡ್ರೋಣ್ ಪ್ರತಿದಾಳಿ!

ಇರಾನ್ ಅಣುಸ್ಥಾವರ ಗುರಿಯಾಗಿಸಿ ಇಸ್ರೇಲ್ ಮಾರಕ ದಾಳಿ ನಡೆಸಿದ ಬೆನ್ನಲ್ಲೇ ಇಸ್ರೇಲ್ ಕೂಡ 100 ಡ್ರೋಣ್ ಮೂಲಕ ಪ್ರತಿದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ.

ಮಧ್ಯ ಪ್ರಾಚ್ಯದಲ್ಲಿ ಭಾರಿ ಸಂಘರ್ಷ ಸಂಭವಿಸುವ ಸಾಧ್ಯತೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಇರಾನ್‌ ವಿರುದ್ಧ ಇಸ್ರೇಲ್‌ ದಾಳಿ ನಡೆಸಿದೆ. ದಾಳಿಯಲ್ಲಿ ಇರಾನ್ ಸೇನಾಪಡೆ ಮುಖ್ಯಸ್ಥ ಹತ್ಯೆಯಾಗಿದ್ದಾರೆ.

ಇರಾನ್‌ ನ ಪರಮಾಣು ಸ್ಥಾವರಗಳು ಮತ್ತು ಮಿಲಿಟರಿ ನೆಲೆಗಳ ಮೇಲೆ ಶುಕ್ರವಾರ ತಡರಾತ್ರಿ ದಾಳಿ ನಡೆಸಿದ್ದು, ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥನ ಹತ್ಯೆಗೈಯಲಾಗಿದೆ ಎಂದು ವರದಿಯಾಗಿದೆ.

ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥ ಮೊಹಮ್ಮದ್ ಬಘೇರಿ ಹಾಗೂ ಪರಮಾಣು ಯೋಜನೆಯ ಇಬ್ಬರು ವಿಜ್ಞಾನಿಗಳು ಹತರಾಗಿದ್ದಾರೆ ಎಂದು ಹೇಳಲಾಗಿದೆ. ಇಸ್ರೇಲ್ ಮೇಲೆ 100 ಡ್ರೋಣ್ ಗಳ ಮೂಲಕ ದಾಳಿ ನಡೆಸಿದ ಇರಾನ್ ಸಾಕಷ್ಟು ಹಾನಿ ಆಗಿವೆ.

ಇರಾನ್ ಅಣ್ವಸ್ತ್ರ ಹಾಗೂ ಪರಮಾಣು ಕೇಂದ್ರಗಳನ್ನು ಗುರಿಯಾಗಿಸಿ ಇಸ್ರೇಲ್ ವೈಮಾನಿಕ ದಾಳಿ ನಡೆಸಿತ್ತು. ಟೆಹ್ರಾನ್‌ ಮೇಲಿನ ದಾಳಿಯನ್ನು ಇರಾನ್ ಖಚಿತಪಡಿಸಿದೆ. ಟೆಹ್ರಾನ್‌‍ನಲ್ಲಿ ಭಾರಿ ಸ್ಫೋಟದ ಸದ್ದುಗಳು ಕೇಳಿಸಿವೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ.

ಸಾವು-ನೋವಿನ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ. ಟೆಹ್ರಾನ್ ಮೇಲೆ ಕ್ಷಿಪಣಿ ಹಾಗೂ ಡ್ರೋನ್ ದಾಳಿ ಬೆನ್ನಲ್ಲೇ ಇರಾನ್‌ನಿಂದ ಪ್ರತಿ ದಾಳಿ ನಿರೀಕ್ಷೆ ಮಾಡುತ್ತಿರುವ ಇಸ್ರೇಲ್ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.

ಅಣ್ವಸ್ತ್ರ ಹಾಗೂ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಕೇವಲ 5 ದಿನಗಳಲ್ಲಿ ಪರಮಾಣು ಬಾಂಬ್ ತಯಾರಿಕೆ ಮಾಡುವ ಸಾಮಗ್ರಿ ಇರಾನ್ ಬಳಿ ಇದೆ ಎಂದು ಇಸ್ರೇಲ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅತ್ತ ಇಸ್ರೇಲ್‌ನಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ಪ್ರತಿದಾಳಿಗೆ ವಾಯು ರಕ್ಷಣಾ ವ್ಯವಸ್ಥೆ ಪೂರ್ಣ ಸಿದ್ಧವಾಗಿದೆ ಎಂದು ಇರಾನ್‌ನ ಸರ್ಕಾರಿ ಟಿ.ವಿ ತಿಳಿಸಿದೆ. ಇಸ್ರೇಲ್ ತುರ್ತು ಪರಿಸ್ಥಿತಿ ಘೋಷಿಸಿದೆ. ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅವರು ಕಾರ್ಯಾಚರಣೆಯ ನಂತರ ಟೆಹ್ರಾನ್‌ನಿಂದ ಪ್ರತೀಕಾರದ ಕ್ರಮ ಸಾಧ್ಯ ಎಂದು ಹೇಳಿದರು.

ಇಸ್ರೇಲ್ ನ ಈ ಕಾರ್ಯಾಚರಣೆಯನ್ನು ‘ರೈಸಿಂಗ್ ಲಯನ್’ ಎಂದು ಕರೆದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ‘ನಾವು ಇರಾನ್ ಅಣ್ವಸ್ತ್ರ ಯೋಜನೆಯ ಮೇಲೆ ದಾಳಿ ನಡೆಸಿದ್ದೇವೆ. ಇರಾನ್‌ನ ಗುರಿ ನಿರ್ದೇಶಿತ ಕ್ಷಿಪಣಿ ಯೋಜನೆಯ ಮೇಲೆಯೂ ದಾಳಿ ನಡೆಸಲಾಗಿದೆ’ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments