Thursday, 29 October 2026 — Kannadavahini
BREAKING NEWS
ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ
ವಿದೇಶ

ಶರಣಾಗುವ ಪ್ರಶ್ನೆಯೇ ಇಲ್ಲ, ಅಮೆರಿಕ, ಇಸ್ರೇಲ್ ಗೆ ಬುದ್ದಿ ಕಲಿಸುತ್ತೇವೆ: ಇರಾನ್ ಸುಪ್ರೀಂ ಖಮೆನೈ ಘೋಷಣೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 2 ವೀಕ್ಷಣೆಗಳು

ಇಸ್ರೇಲ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಮೂಗು ತೂರಿಸಿದರೆ ತಕ್ಕ ಬುದ್ದಿ ಕಲಿಸಬೇಕಾಗುತ್ತದೆ. ತಪ್ಪು ಮಾಡಿರುವ ಇಸ್ರೇಲ್ ಗೆ ಶಿಕ್ಷೆ ಖಂಡಿತ ಆಗಲಿದೆ ಎಂದು ಇರಾನ್ ಸುಪ್ರೀಂ ಅಯೊತೊಲ್ಲಾಹ್ ಅಲಿ ಖಮೆನೈ ಖಡಕ್ ಎಚ್ಚರಿಕೆ ನೀಡಿದ್ದಾರೆ.

ದೇಶವನ್ನು ಉದ್ದೇಶಿಸಿ ಬುಧವಾರ ಭಾಷಣ ಮಾಡಿದ ಅವರು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೇಷರತ್ ಶರಣಾತಿ ಪ್ರಸ್ತಾಪವನ್ನು ತಿರಸ್ಕರಿಸಿದರು.

ಇರಾನ್ ಯಾವುದೇ ಕಾರಣಕ್ಕೂ ಯಾರಿಗೂ ಶರಣಾಗುವುದಿಲ್ಲ. ಟೆಹರ್ರಾನ್ ಮೇಲೆ ದಾಳಿ ನಡೆಸುವ ಮೂಲಕ ಯುದ್ಧವನ್ನು ನಮ್ಮ ಮೇಲೆ ಹೇರಲಾಗಿದೆ. ಇದನ್ನು ಇರಾನ್ ದಿಟ್ಟವಾಗಿ ಎದುರಿಸಲಿದೆ ಎಂದು ಸ್ಪಷ್ಟಪಡಿಸಿದರು.

ಬುದ್ದಿವಂತರಿಗೆ ಇರಾನ್ ಬಗ್ಗೆ ಚೆನ್ನಾಗಿ ಗೊತ್ತಿದೆ. ಇರಾನ್ ಇತಿಹಾಸ ಬಲ್ಲವರಿಗೆ ಗೊತ್ತು ನಾವು ಬೆದರಿಕೆಯ ಹೇಳಿಕೆಗಳಿಗೆ ಬಗ್ಗುವುದಿಲ್ಲ. ಇರಾನ್ ಯಾವುದೇ ಬೆದರಿಕೆಗೆ ಹೆದರಿ ಶರಣಾಗುವುದಿಲ್ಲ. ಒಂದು ವೇಳೆ ಅಮೆರಿಕ ಯುದ್ಧದಲ್ಲಿ ಮಧ್ಯಪ್ರವೇಶಿಸಿ ನಮ್ಮ ಮೇಲೆ ದಾಳಿ ಮಾಡಿದರೆ ಅಮೆರಿಕ್ಕೆ ದೊಡ್ಡ ಹಾನಿ ಮಾಡಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಖಮೈನಿ ಹೇಳಿದರು.

ಇಸ್ಲಾಮಿಕ್ ದೇಶದ ಮೇಲೆ ಯಾರೂ ಶಾಂತಿ ಅಥವಾ ಯುದ್ಧದ ಆಯ್ಕೆಯ ಒತ್ತಡ ಹೇರಲು ಸಾಧ್ಯವಿಲ್ಲ. ಇಸ್ರೇಲ್ ಮಾಡುತ್ತಿರುವ ಯುದ್ಧದಲ್ಲಿ ಅಮೆರಿಕದ ಪಾತ್ರ ಮೊದಲು ಇರಲಿಲ್ಲ. ಆದರೆ ಕದನ ವಿರಾಮದ ಬಗ್ಗೆ ಹೇರುವ ಮೂಲಕ ಪರೋಕ್ಷವಾಗಿ ಇಸ್ರೇಲ್ ಗೆ ನೆರವು ಘೋಷಿಸಿತ್ತು. ಆದರೆ ಇದೀಗ ಕದನ ವಿರಾಮದ ತಂತ್ರದ ಹಿಂದೆ ಅಮೆರಿಕ ದೊಡ್ಡ ಷಡ್ಯಂತ್ರ ರೂಪಿಸಿರುವುದು ನಮಗೆ ತಿಳಿದು ಬಂದಿದೆ ಎಂದು ಅವರು ವಿವರಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8393 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment