ಬೆಂಗಳೂರು: ಕಳೆದ ಕೆಲವು ದಿನಗಳಿಂದ ದುರ್ಬಲಗೊಂಡಿದ್ದ ಮುಂಗಾರು ಮತ್ತೆ ಚುರುಕುಗೊಂಡಿದ್ದು, ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ ಸೇರಿದಂತೆ 6 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಧಾರವಾಡ, ಕೊಡಗು ಸೇರಿದಂತೆ 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ , ಕೊಪ್ಪಳ, ಬೀದರ್, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯಲ್ಲಾಪುರ, ಸಿದ್ದಾಪುರ, ಖಾನಾಪುರ, ಆಗುಂಬೆ, ಸೋಮವಾರಪೇಟೆ, ಲೋಂಡಾ, ಕದ್ರಾ, ಬನವಾಸಿ, ಕೊಟ್ಟಿಗೆಹಾರದಲ್ಲಿ ಹೆಚ್ಚು ಮಳೆಯಾಗಿದೆ. ಧರ್ಮಸ್ಥಳ, ಕಳಸ, ಶೃಂಗೇರಿ, ಬೆಳ್ತಂಗಡಿ, ಮೂಡುಬಿದಿರೆ, ಕಾರ್ಕಳ, ಜೋಯ್ಡಾ, ಉಪ್ಪಿನಂಗಡಿ, ಕುಂದಾಪುರ, ಅಂಕೋಲಾ, ಗೇರುಸೊಪ್ಪ, ನಾಪೋಕ್ಲು, ಭರಮಸಾಗರ, ಮಾಣಿ, ಮುಲ್ಕಿ, ಕುಮಟಾ, ಹೊನ್ನಾಳಿ, ಪುತ್ತೂರು, ಜಯಪುರ, ತ್ಯಾಗರ್ತಿ, ವಿರಾಜಪೇಟೆ, ಅರಕಲಗೂಡು, ಪೊನ್ನಂಪೇಟೆ, ಜಗಳೂರು, ಹಳಿಯಾಳ, ಮಂಕಿ, ಕೂಡಲಸಂಗಮ, ಹುಬ್ಬಳ್ಳಿ, ಕಿತ್ತೂರು ಹಾಗೂ ಚಿಕ್ಕೋಡಿಯಲ್ಲಿ ಸಾಧಾರಣ ಮಳೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಂಗಳವಾರ ಅಲ್ಲಲ್ಲಿ ತುಂತುರು ಮಳೆಯಾಗಿದೆ. ಹೆಚ್ಚು ಗಾಳಿ ಬೀಸುತ್ತಿದೆ. ಬೆಂಗಳೂರು ನಗರದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಹಾಗೂ 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹೆಚ್ಎಎಲ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಹಾಗೂ 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.



