Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

3 ಮರಿ ಸೇರಿ 4 ಹುಲಿಗಳ ಅಸಹಜ ಸಾವು: ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 31 ವೀಕ್ಷಣೆಗಳು
eshwar khandre

ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಜ ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ.

ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿವಂಗತ ಪ್ರಧಾನಿ ಇಂದಿರಾಗಾಂಧೀ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದ್ದು, 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.

ಕೂಡಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, ಸ್ಥಳ ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ವಹಿಸುವಂತೆ ಮತ್ತು 3 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment