ಮಂಡ್ಯ: ಮೈದುಂಬಿ ಹರಿಯುತ್ತಿರುವ ಕೃಷ್ಣರಾಜ ಸಾಗರ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸೋಮವಾರ ಬಾಗಿನ ಅರ್ಪಿಸಲಿದ್ದಾರೆ.
1940ರ ಬಳಿಕ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಕೆಆರ್ ಎಸ್ ಜಲಾಶಯ ಗರಿಷ್ಠ 124 ಅಡಿ ನೀರು ಭರ್ತಿಯಾಗಿದೆ.
ಹಾಸನ, ಮಡಿಕೇರಿ ಸೇರಿದಂತೆ ಕಾವೇರಿ ಜಲನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಇನ್ನು ಕೆಲವು ದಿನಗಳ ಕಾಲ ಮುಂಗಾರು ಆರ್ಭಟ ಮುಂದುವರಿಯುವ ವಿಶ್ವಾಸವಿದೆ.
ಈಗಾಗಲೇ 30 ಸಾವಿರಕ್ಕೂ ಅಧಿಕ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಮಳೆ ಅಬ್ಬರ ಇದೇ ರೀತಿ ಮುಂದುವರಿದರೆ ಹೊರಹರಿವಿನ ಪ್ರಮಾಣ 50 ಸಾವಿರ ಕ್ಯೂಸೆಕ್ಸ್ ಗೆ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.



