Thursday, May 14, 2026
Google search engine
Homeರಾಜಕೀಯಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧ್ಯಕ್ಷ-ಉಪಾಧ್ಯಕ್ಷ ಬಿಜೆಪಿ ಪಾಲು!

ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧ್ಯಕ್ಷ-ಉಪಾಧ್ಯಕ್ಷ ಬಿಜೆಪಿ ಪಾಲು!

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳೆರಡು ಬಿಜೆಪಿ ಪಾಲಾಗಿದೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಆಘಾತವಾಗಿದೆ.

ಸೋಮವಾರ ನಡೆದ ಪಾಲಿಕೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಮಹಾಪೌರರಾಗಿ ಜ್ಯೋತಿ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ಸಂತೋಷ್ ಚವ್ಹಾಣ್ ಭಾರೀ ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

19ನೇ ವಾರ್ಡ್ ಬಿಜೆಪಿ ಸದಸ್ಯೆ ಜ್ಯೋತಿ ಪಾಟೀಲ ಮತ್ತು 49ನೇ ವಾರ್ಡ್ ಸದಸ್ಯ ಸಂತೋಷ್ ಚವ್ಹಾಣ್ ತಲಾ 47 ಮತಗಳನ್ನು ಪಡೆದು ಗೆಲುವು ಸಾಧಿಸಿದರು.

59ನೇ ವಾರ್ಡ್ ಸದಸ್ಯೆ ಕಾಂಗ್ರೆಸ್ ನ ಸುವರ್ಣಾ ಕಲಕುಂಟ್ಲಾ ವಿರುದ್ಧ ಬಿಜೆಪಿಯ ಜ್ಯೋತಿ ಪಾಟೀಲ್ ಹಾಗೂ 76ನೇ ವಾರ್ಡ್ ಸದಸ್ಯ ಶಂಭುಗೌಡ ರುದ್ರಗೌಡ ಸಾಲಮನಿ ವಿರುದ್ಧ ಸಂತೋಷ ಚವ್ಹಾಣ ಗೆಲುವು ಪಡೆದರು.

ಮಹಾಪೌರ ಮತ್ತು ಉಪ ಮಹಾಪೌರ ಚುನಾವಣೆಯಲ್ಲಿ ಸದಸ್ಯರು ಕೈ ಎತ್ತುವ ಮೂಲಕ ತಮ್ಮ ಮತ ಚಲಾಯಿಸಿದರು. ಈ ವೇಳೆ ಬಿಜೆಪಿಗೆ ಮಹಾಪೌರ ಹಾಗೂ ಉಪಮಹಾಪೌರ ಒಲಿದಿದೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರ ಮತ್ತು ಉಪಮಹಾಪೌರ ಚುನಾವಣೆಗೆ ಪಾಲಿಕೆ ಸದಸ್ಯರು, ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ತು ಸದಸ್ಯರು ಸೇರಿ ಒಟ್ಟು 90 ಜನ ಮತದಾರರು ಇದ್ದು, ಇಂದಿನ ಮಹಾಪೌರ ಮತ್ತು ಉಪಮಹಾಪೌರ ಚುನಾವಣೆಯಲ್ಲಿ 87 ಜನರು ಪಾಲ್ಗೊಂಡಿದ್ದರು. ಮೂರು ಜನ ಸದಸ್ಯರು ಗೈರು ಹಾಜರಾಗಿದ್ದರು.

ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಎಸ್.ಎಸ್.ಬಿರಾದಾರ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ರುದ್ರೇಶ ಘಾಳಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments