Thursday, December 25, 2025
Google search engine
Homeರಾಜಕೀಯಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಭ್ಯ ಪದ ಬಳಕೆ: ಬಿಜೆಪಿ ಎಂಎಲ್ ಸಿ ವಿರುದ್ಧ...

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಭ್ಯ ಪದ ಬಳಕೆ: ಬಿಜೆಪಿ ಎಂಎಲ್ ಸಿ ವಿರುದ್ಧ ಸಭಾಪತಿಗೆ ದೂರು

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಅಸಂಸದೀಯ ಹಾಗೂ ಅಸಭ್ಯ ಪದ ಬಳಸಿದ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಸರ್ಕಾರಿ ನೌಕರರ ನಿಯೋಗ ಸಭಾಪತಿಗೆ ದೂರು ನೀಡಿದೆ.

ಸರ್ಕಾರದ ಪ್ರಮುಖ ಹುದ್ದೆಯಲ್ಲಿರುವ ಮಹಿಳಾ ಅಧಿಕಾರಿ ವಿರುದ್ಧ ಅಸಭ್ಯವಾಗಿ ಸಾರ್ವಜನಿಕವಾಗಿ ನಿಂದಿಸಿದ ರವಿಕುಮಾರ್ ಅವರನ್ನು ವಿಧಾನಪರಿಷತ್ ಸ್ಥಾನದಿಂದ ವಜಾಗೊಳಿಸಬೇಕು ಎಂದು ಸರ್ಕಾರಿ ನೌಕರರ ನಿಯೋಗ ದೂರಿನಲ್ಲಿ ಆಗ್ರಹಿಸಿದೆ.

ಇದಕ್ಕೂ ಮುನ್ನ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್​ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ರವಿಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದೂರು ದಾಖಲಿಸಿದ್ದಾರೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ ಎಂದು ಎಂದು ಜೂನ್ 30ರಂದು ವಿಧಾನಸೌಧದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್ ಅಸಭ್ಯವಾಗಿ ಟೀಕೆ ಮಾಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments