ಮೈಸೂರು: ಪ್ರಯತ್ನ ವಿಫಲ ಆದರೂ ಪ್ರಾರ್ಥನೆ ವಿಫಲ ಆಗಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರವಾಗಿ ಸಿಎಂ ರೇಸ್ ನಿಂದ ಹೊರ ನಡೆದರೆ ಎಂಬ ಪ್ರಶ್ನೆಗೆ ಈ ರೀತಿ ಉತ್ತರಿಸಿದರು.
ನಾನು ನನಗೆ ಏನೂ ಬೇಕು ಪ್ರಾರ್ಥನೆ ಮಾಡಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ನಮಗೆ ಬುದ್ಧವಾದ ಹೇಳಿದ್ದಾರೆ. ಹೈಕಮಾಂಡ್ ಕೂಡ ಕೆಲ ವಿಚಾರ ಹೇಳಿದೆ. ಇಲ್ಲಿ ರಾಜಕೀಯ ಚರ್ಚೆ ಬೇಡ ಎಂದು ಅವರು ಹೇಳಿದರು.
ಎಲ್ಲರಿಗೂ ದುಃಖವನ್ನು ದೂರ ಮಾಡುವ ದೇವಿ ಚಾಮುಂಡಿ. ನಾಡಿನ ಎಲ್ಲರಿಗೂ ಸುಖ ಸಮೃದ್ಧಿಯನ್ನ ಕೊಡಲಿ ಎಂದು ದೇವರಲ್ಲೆ ಪ್ರಾರ್ಥಿಸಿದ್ದೇನೆ ಎಂದು ಅವರು ಹೇಳಿದರು.



