Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಮೇಕೆದಾಟು ಯೋಜನೆ ಯಾರ ಕೈಯಲ್ಲೂ ಆಗಲ್ಲ, ದೇವೇಗೌಡರ ಕುಟುಂಬದಿಂದ ಮಾತ್ರ ಸಾಧ್ಯ: ಎಚ್.ಡಿ. ಕುಮಾರಸ್ವಾಮಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 20 ವೀಕ್ಷಣೆಗಳು
hd kumarswamy

ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲು ಇವರ ಯಾರ ಕೈಯಲ್ಲೂ ಆಗಲ್ಲ. ಅದು ದೇವೇಗೌಡರ ಕುಟುಂಬದಿಂದ ಮಾತ್ರ ಸಾಧ್ಯ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ಆಡಳಿತಾರೂಢ ಮಿತ್ರ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ. ಹಾಗೆ ಮಾಡಿದರೆ, ನಾನು ಐದೇ ನಿಮಿಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ ಎಂದರು.

ಈ ಹಿಂದೆ ನಾನು ಮೇಕೆದಾಟು ಯೋಜನೆಗೆ ಪ್ರಧಾನಿಯಿಂದ 5 ನಿಮಿಷದಲ್ಲಿ ಅನುಮತಿ ಕೊಡಿಸುತ್ತೇನೆ ಎಂಬ ಹಳೆಯ ಮಾತಿಗೆ ನಾನು ಈಗಲೂ ಬದ್ಧ. ಕಾಂಗ್ರೆಸ್ ಪಕ್ಷದವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ. ಧಿಕ್ಕರಿಸುವ ಶಕ್ತಿಯೂ ಇಲ್ಲ. ತಮಿಳುನಾಡು ಸರ್ಕಾರವನ್ನು ಧಿಕ್ಕರಿಸಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಮುಂದಾದರೆ ಅದು ಸಾಧ್ಯವಾಗುತ್ತದೆ. ಕಾಂಗ್ರೆಸ್ ಕೈಯಲ್ಲಿ ಅದು ಸಾಧ್ಯವಿಲ್ಲ ಎಂದು ಅವರು ಪುನರುಚ್ಚರಿಸಿದರು.

ತಮಿಳುನಾಡು ಸರ್ಕಾರವನ್ನು ಒಪ್ಪಿಸದೆ ಮೇಕೆದಾಟು ಯೋಜನೆಯ ಕಚೇರಿ ತೆರೆದರೆ ಏನು ಪ್ರಯೋಜನ? ಮೇಕೆದಾಟು ಯೋಜನೆ ಜಾರಿಗೊಳಿಸುತ್ತೇವೆ ಎಂದು ಹೇಳಿದವರು ಕಾಂಗ್ರೆಸ್​​ನವರೇ ವಿನಹ ನಾನಲ್ಲ. ಯೋಜನೆ ಮಾಡುತ್ತೇವೆ ಎಂದು ಜನರಿಗೆ ಭರವಸೆ ನೀಡಿದವರು ಮಾಡಬೇಕು ತಾನೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಮೇಕೆದಾಟು ಯೋಜನೆ ಹೆಸರು ಹೇಳಿಕೊಂಡು ಎರಡೂವರೆ ವರ್ಷದಿಂದ ಸುಮ್ಮನೆ ಸಮಯ ಹಾಳು ಮಾಡುತ್ತಿದ್ದಾರೆ ಅಷ್ಟೇ. ಸುಮ್ಮನೆ ನನ್ನ ಮೇಲೆ ಜವಾಬ್ದಾರಿ ಹೊರಿಸಿದರೆ ನಾನು ಹೇಗೆ ಮಾಡಲು ಸಾಧ್ಯ ಎಂದು ಅವರು ಪ್ರಶ್ನಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment