Saturday, May 16, 2026
Google search engine
Homeಅಪರಾಧಬೆಳಗಾವಿಯಲ್ಲಿ ತಾಯಿ-ಮಕ್ಕಳು ಆತ್ಮಹತ್ಯೆಗೆ ಯತ್ನ: ಮೂವರ ಸಾವು

ಬೆಳಗಾವಿಯಲ್ಲಿ ತಾಯಿ-ಮಕ್ಕಳು ಆತ್ಮಹತ್ಯೆಗೆ ಯತ್ನ: ಮೂವರ ಸಾವು

ತಾಯಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಮೂವರು ಮೃತಪಟ್ಟ ದಾರುಣ ಘಟನೆ ಬೆಳವಾಗಿಯಲ್ಲಿ ನಡೆದಿದೆ.

ಬೆಳಗಾವಿ ನಗರದ ಜೋಷಿಮಾಳ್ ನಿವಾಸಿ ತಾಯಿ ಮಂಗಳಾ, ಮಗ ಸಂತೋಷ್ ಕುರಡೇಕರ್, ಸುವರ್ಣ ಮೃತಪಟ್ಟಿದ್ದು, ಸುನಂದಾ ಕುರಡೇಕರ್ ಗಂಭೀರ ಸ್ಥಿತಿಯಲ್ಲಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಮಂಗಳವಾರ ಬೆಳಗ್ಗೆ 9 ಗಂಟೆಗೆ ಕುಟುಂಬಸ್ಥರು ವಿಷ ಸೇವಿಸಿದ್ದಾರೆ. ಗಂಭೀರವಾಗಿರುವ ಯುವತಿಯನ್ನು ಸ್ಥಳೀಯ ‌ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಲದ ಬಾಧೆ ತಾಳಲಾರದೇ ತಾಯಿ ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ಶಹಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments