Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್
ದೇಶ

ಹಾಸನದಲ್ಲಿ ಹೃದಯಾಘಾತಗಳಿಗೆ ಶುಗರ್, ಮದ್ಯಪಾನ ಕಾರಣ: ತಾಂತ್ರಿಕ ಸಮಿತಿ ವರದಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 25 ವೀಕ್ಷಣೆಗಳು
heart attack
heart attack

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಗಳು ಹೆಚ್ಚಾಗುತ್ತಿರುವುದಕ್ಕೆ ಮಧುಮೇಹ, ಮದ್ಯಪಾನ ಹಾಗೂ ಕುಟುಂಬದ ಹಿನ್ನೆಲೆ ಕಾರಣವಾಗಿರುವುದು ತಾಂತ್ರಿಕ ಸಮಿತಿ ಸದಸ್ಯರು ನೀಡಿರುವ ಅಧ್ಯಯನ ವರದಿಯಲ್ಲಿ ಬಹಿರಂಗಗೊಂಡಿದೆ.

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಗಳು ಹೆಚ್ಚುತ್ತಿರುವ ಸಂಬಂಧ ಅಧ್ಯಯನ ನಡೆಸಿ ತಾಂತ್ರಿಕ ಸಮಿತಿ ಸದಸ್ಯರು ನೀಡಿದ ವರದಿಯನ್ನು ನಗರದಲ್ಲಿ ಗುರುವಾರ ಸ್ವೀಕರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್​ ತಾಂತ್ರಿಕ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿದರು.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್​ ಗುಂಡುರಾವ್​, ಹಾಸನದಲ್ಲಿ ಜನರು ಹೃದಯಾಘಾತದಿಂದ ಸಾವಿಗೀಡಾಗಿರುವುದಕ್ಕೆ ಕಾರಣ ಮಧುಮೇಹ, ಮದ್ಯಪಾನ ಮತ್ತು ಕುಟುಂಬದ ಹಿನ್ನೆಲೆ ಎನ್ನುವುದು ವರದಿಯಿಂದ ತಿಳಿದುಬಂದಿದೆ ಎಂದು ಹೇಳಿದರು.

ಮೇ ಮತ್ತು ಜೂನ್ ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ 24 ಜನರ ಸಾವಿನ ಬಗ್ಗೆ ತಜ್ಞರು ನೀಡಿದ ಅಧ್ಯಯನ ವರದಿಯಲ್ಲಿ ನಾಲ್ವರು ಹೃದಯ ಸ್ತಂಭನದಿಂದ ಮೃತಪಟ್ಟಿಲ್ಲ, ಇನ್ನುಳಿದ 20 ಜನರಲ್ಲಿ 10 ಜನರು ಹೃದಯಕ್ಕೆ ಸಂಬಂಧಿ ಸಮಸ್ಯೆಯಿಂದ ಮೃತಪಟ್ಟಿದ್ದಾರೆ. 10 ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಬಹುದು. ಮೃತಪಟ್ಟ 20 ಜನರಲ್ಲಿ 15 ಮಂದಿ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ. ” ಎಂದರು.

ಹಾಸನದಲ್ಲಿ ಹೃದಯಾಘಾತ ಹೆಚ್ಚಾಗುತ್ತಿದೆಯೇ ಎಂಬ ಆತಂಕ ಇತ್ತು. 2024ರಲ್ಲಿ ಹೃದಯಾಘಾತದಿಂದ 24 ಜನರು ಮೃತಪಟ್ಟಿದ್ದಾರೆ. ಈ ವರ್ಷ 20 ಜನರ ಸಾವಾಗಿದೆ, ಆತಂಕ ಪಡುವ ಸಂಗತಿ ಇಲ್ಲ. ಚಿಕ್ಕ ವಯಸ್ಸಿನವರಿಗೆ ಹೃದಯಾಘಾತವಾಗುತ್ತಿದ್ದು ಗಂಭೀರ ವಿಚಾರವಾಗಿದೆ. ಚಿಕ್ಕ ವಯಸ್ಸಿನವರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದಕ್ಕೆ ಅತಿಯಾದ ಬೊಜ್ಜು ಕಾರಣ ಎಂಬುವುದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದೆ ಎಂದು ತಿಳಿಸಿದರು.

ಚಾಲಕರಿಗೆ ತಪಾಸಣೆ:

ಚಾಲಕರೇ ಹೆಚ್ಚು ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಆಟೋ, ಕ್ಯಾಬ್ ಚಾಲಕರ ಬಗ್ಗೆ ಹೆಚ್ಚು ಗಮನಹರಿಸುತ್ತೇವೆ. ಆಟೋ, ಕ್ಯಾಬ್ ಚಾಲಕರಿಗೆ ಪ್ರತ್ಯೇಕ ತಪಾಸಣೆ ಮಾಡಿಸಲು ಸಲಹೆ ನೀಡುತ್ತೇನೆ. ಸ್ಕ್ರೀನಿಂಗ್ ಮಾಡಿಸಲು ಚಾಲಕರ ಸಂಘದ ಜತೆ ಮಾತುಕತೆ ಮಾಡುತ್ತೇವೆ. ಮೃತಪಟ್ಟ ಬಹುತೇಕರಲ್ಲಿ‌ ಧೂಮಪಾನ ಹಾಗೂ ಮದ್ಯಪಾನದ ಅಭ್ಯಾಸ ಇತ್ತು. ಸಮುದಾಯ ಪ್ರಾಥಮಿಕ ಕೇಂದ್ರದಲ್ಲಿ ಇಸಿಜಿ ವ್ಯವಸ್ಥೆ ಮಾಡುತ್ತೇವೆ. ಹೃದಯಾಘಾತಕ್ಕೂ ಕೊರೋನಾಗೂ ಸಂಬಂಧ ಇಲ್ಲವೆಂದು ಹೇಳಲಾಗಿದೆ ಎಂದು ಹೇಳಿದರು.

ಹೃದಯ ಜ್ಯೋತಿ ವಿಸ್ತರಣೆ:

ಮಾಹಿತಿ ಆಧಾರದ ಮೇಲೆ ಮಕ್ಕಳಿಗೆ ಸ್ಕ್ರೀನಿಂಗ್ ಶುರು ಮಾಡಲಿದ್ದೇವೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಸಿಜಿ ಅಳವಡಿಸಲು ತಜ್ಞರ ಸಲಹೆ ನೀಡಿದ್ದಾರೆ. ಹೃದಯ ಜ್ಯೋತಿ ಯೋಜನೆ ವಿಸ್ತರಣೆ ಮಾಡಬೇಕೆಂಬ ಆಲೋಚನೆ ಇದೆ. ಸಿಪಿಆರ್ ತರಬೇತಿ ನೀಡುವಂತೆ ಹೃದ್ರೋಗ ತಜ್ಞರು ಸಲಹೆ ನೀಡಿದ್ದಾರೆ ಎಂದು ತಿಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8412 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment