ಭಾರತ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಮಾಜಿ ನಾಯಕ ಜೋ ರೂಟ್ ಶತಕ ಸಿಡಿಸಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.
ಲಾರ್ಡ್ಸ್ ನಲ್ಲಿ ನಡೆಯುತ್ತಿರುವ ಪಂದ್ಯದ ಮೊದಲ ದಿನ 99 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದ ಜೋ ರೂಟ್ ಎರಡನೇ ದಿನದಾಟ ಆರಂಭವಾಗುತ್ತಿದ್ದಂತೆ ಶತಕ ಪೂರೈಸಿದರು. ಈ ಮೂಲಕ ಇಂಗ್ಲೆಂಡ್ ಮೊದಲ ಇನಿಂಗ್ಸ್ ನಲ್ಲಿ 7 ವಿಕೆಟ್ ಗೆ 271 ರನ್ ಕಲೆ ಹಾಕಿತು.
ಜೋ ರೂಟ್ 199 ಎಸೆತಗಳಲ್ಲಿ 10 ಬೌಂಡರಿ ಸಹಾಯದಿಂದ 104 ರನ್ ಬಾರಿಸಿದ್ದಾಗ ಬುಮ್ರಾ ಎಸೆತದಲ್ಲಿ ಬೌಲ್ಡ್ ಆಗಿ ನಿರ್ಮಿಸಿದರು.
ರೂಟ್ ಗೆ ಇದು ಲಾರ್ಡ್ಸ್ ಮೈದಾನದಲ್ಲಿ 8ನೇ ಶತಕವಾಗಿದ್ದರೆ, ಭಾರತ ವಿರುದ್ಧ 11ನೇ ಶತಕ ಸಿಡಿಸಿದರು. ಈ ಮೂಲಕ ಭಾರತ ವಿರುದ್ಧ ಅತೀ ಹೆಚ್ಚು ಶತಕ ಸಿಡಿಸಿದ ಆಸ್ಟ್ರೇಲಿಯಾದ ಸ್ಟಿವನ್ ಸ್ಮಿತ್ ದಾಖಲೆಯನ್ನು ಸರಿಗಟ್ಟಿದರು.
34 ವರ್ಷದ ರೂಟ್ ಗೆ ಇದು 37ನೇ ಶತಕವಾಗಿದೆ. ಟೆಸ್ಟ್ ನಲ್ಲಿ ಅತೀ ಹೆಚ್ಚು ಶತಕ ಸಿಡಿಸಿದ 4ನೇ ಬ್ಯಾಟರ್ ಆಗಿದ್ದಾರೆ. ಇದಕ್ಕೂ ಮುನ್ನ ಸಚಿನ್ (51), ರಿಕಿ ಪಾಂಟಿಂಗ್ (41), ಸಂಗಕ್ಕಾರ (38) ನಂತರ ರೂಟ್ ಸ್ಥಾನ ಗಳಿಸಿದ್ದಾರೆ. ಅಲ್ಲದೇ ಟೆಸ್ಟ್ ಕ್ರಿಕೆಟ್ ನಲ್ಲಿ ಸಚಿನ್ ತೆಂಡೂಲ್ಕರ್ ಅವರ 15,921 ರನ್ ದಾಖಲೆಯ ಮುರಿಯಲು ಮತ್ತಷ್ಟು ಸಮೀಪ ತಲುಪಿದ್ದಾರೆ.



