Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ದೇಶ

16ನೇ ರೋಜ್ ಗಾರ್ ಮೇಳದಲ್ಲಿ 51,000 ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 3 ವೀಕ್ಷಣೆಗಳು
pm-modi
pm-modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000ಕ್ಕೂ ಹೆಚ್ಚು ಯುವಕರಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನೇಮಕಾತಿ ಪತ್ರ ವಿತರಿಸಿದ್ದಾರೆ.

ಶನಿವಾರ ನಡೆದ 16 ನೇ ಆವೃತ್ತಿಯ ರೋಜ್‌ಗಾರ್ ಮೇಳದ ಅಂಗವಾಗಿ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ನೇಮಕಾತಿ ಪತ್ರ ವಿತರಿಸಿದರು.

ನೇಮಕಾತಿದಾರರು ರೈಲ್ವೆ ಸಚಿವಾಲಯ, ಗೃಹ ವ್ಯವಹಾರಗಳ ಸಚಿವಾಲಯ, ಅಂಚೆ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಇತರ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿ ಉದ್ಯೋಗಕ್ಕೆ ಸೇರಲಿದ್ದಾರೆ.

ಏಪ್ರಿಲ್‌ನಲ್ಲಿ ನಡೆದ 15 ನೇ ರೋಜ್‌ಗಾರ್ ಮೇಳದಲ್ಲಿ 6,677 ನೇಮಕಾತಿ ಪತ್ರಗಳನ್ನು ನೀಡಲಾಗಿತ್ತು. ಈ ಬಾರಿ ದಾಖಲೆಯ 51 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಿಸಲಾಯಿತು.

ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿ ಉದ್ಯೋಗ ಸೃಷ್ಟಿಸುವತ್ತ ಕೇಂದ್ರ ಸರ್ಕಾರ ಗಮನ ಹರಿಸಿದೆ. ಕಳೆದ 11 ವರ್ಷಗಳಲ್ಲಿ ದೇಶವು ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಸಾಧಿಸಿದೆ ಎಂದರು.

ತಮ್ಮ ನೇತೃತ್ವದ ಸರ್ಕಾರವು ಹಲವು ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡಿದೆ. ಬಡವರಿಗೆ 4 ಕೋಟಿಗೂ ಹೆಚ್ಚು ಮನೆಗಳ ನಿರ್ಮಾಣ, 10 ಕೋಟಿಗೂ ಹೆಚ್ಚು ಹೊಸ LPG ಸಂಪರ್ಕ, ಮೇಲ್ಛಾವಣಿ ಸೌರಶಕ್ತಿ ಕಾರ್ಯಕ್ರಮ, ಲಕ್ಷಾಂತರ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಾಗಿದೆ ಎಂದು ಹೇಳಿದರು.

ಕಳೆದ 10 ವರ್ಷಗಳಲ್ಲಿ 25 ಕೋಟಿಗೂ ಹೆಚ್ಚು ಜನರನ್ನು ಬಡತನದಿಂದ ಮೇಲಕ್ಕೆತ್ತಲಾಗಿದೆ. ಇದು ಅವರಿಗೆ ಉದ್ಯೋಗ ಮತ್ತು ಆದಾಯದ ಮೂಲವನ್ನೂ ಹೆಚ್ಚಿಸಿದೆ. ಉತ್ಪಾದನೆಯನ್ನು ಹೆಚ್ಚಿಸುವತ್ತ ತಮ್ಮ ಸರ್ಕಾರ ಗಮನ ಹರಿಸಿರುವುದು ಫಲ ನೀಡಿದೆ. 11 ವರ್ಷಗಳಲ್ಲಿ ವಿದ್ಯುತ್​ ಉತ್ಪಾದನೆ ಐದು ಪಟ್ಟು ಹೆಚ್ಚಾಗಿದೆ. ಮೊಬೈಲ್ ಉತ್ಪಾದನಾ ಘಟಕಗಳ ಸಂಖ್ಯೆ ಎರಡರಿಂದ 300 ಕ್ಕೆ ಏರಿದೆ ಎಂದು ತಿಳಿಸಿದರು.

“ಆಪರೇಷನ್ ಸಿಂಧೂರ್ ನಂತರ ರಕ್ಷಣಾ ಉತ್ಪಾದನೆಯನ್ನು ಬಹುವಾಗಿ ಹೆಚ್ಚಿಸಲಾಗಿದೆ. ಅದರ ಉತ್ಪಾದನಾ ಮೌಲ್ಯವು 1.25 ಲಕ್ಷ ಕೋಟಿ ರೂ.ಗಳಿಗೆ ಮೀರಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment