Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್
ದೇಶ

ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ: 2 ಸಾವು, 9 ಮಂದಿ ರಕ್ಷಣೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 28 ವೀಕ್ಷಣೆಗಳು
delhi building

ನವದೆಹಲಿ: ನಾಲ್ಕು ಅಂತಸ್ತಿನ ಕಟ್ಟಡ ಕುಸಿದಿದ್ದರಿಂದ ಇಬ್ಬರು ಮೃತಪಟ್ಟಿರುವ ಘಟನೆ ಈಶಾನ್ಯ ದೆಹಲಿಯ ವೆಲ್ಕಮ್ ಪ್ರದೇಶದಲ್ಲಿ ಶನಿವಾರ ಸಂಭವಿಸಿದೆ.

ಕಟ್ಟಡ ಕುಸಿತದಿಂದ ಆವಶೇಷಗಳಡಿ ಸಿಲುಕಿದ್ದ 9 ಜನರನ್ನು ರಕ್ಷಿಸಲಾಗಿದ್ದು, ಇನ್ನೂ ಹಲವರು ಸಿಲುಕಿರುವ ಸಾಧ್ಯತೆ ಇದೆ. ರಕ್ಷಿಸಲ್ಪಟ್ಟ ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಬೆಳಗ್ಗೆ ಸುಮಾರು 7 ಗಂಟೆಗೆ ಕಟ್ಟಡ ಕುಸಿದಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು. ಅನೇಕರು ಅವಶೇಷಗಳ ಅಡಿ ಸಿಲುಕಿರುವ ಸಾಧ್ಯತೆ ಇದ್ದು, ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ಏಳು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿದ್ದು, ಈ ಕುರಿತು ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸ್ಥಳೀಯರು ಮುಂಜಾನೆ ವಾಕ್​ಗಾಗಿ ಹೋಗುತ್ತಿದ್ದ ಸಂದರ್ಭದಲ್ಲೇ ಕಟ್ಟಡ ಕುಸಿದಿದೆ. ತಕ್ಷಣ ಸ್ಥಳದಲ್ಲಿದ್ದ ಜನರು ಪೊಲೀಸರು ಮತ್ತು ಅಗ್ನಿಶಾಮಕ ವಾಹನ ಆಗಮನಕ್ಕೂ ಮುನ್ನವೇ ಅವಶೇಷಗಳ ಅಡಿಯಲ್ಲಿ ಸಿಲುಕಿದವರ ರಕ್ಷಣೆಗೆ ಮುಂದಾದರು. ಬಳಿಕ ರಕ್ಷಣಾ ತಂಡಗಳು ಕೂಡ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿವೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8412 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment