Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ಬೆಂಗಳೂರು

ಬೆಂಗಳೂರಿನಲ್ಲಿ ಬೇಕಾಬಿಟ್ಟಿ ಪ್ರಯಾಣಿಕರಿಂದ ವಸಲು: 1000 ಆಟೋಗಳ ವಿರುದ್ಧ ಕೇಸ್ ದಾಖಲು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 28 ವೀಕ್ಷಣೆಗಳು
auto drivers

ಬೆಂಗಳೂರು: ಪ್ರಯಾಣಿಕರಿಂದ ಬೇಕಾಬಿಟ್ಟಿ ಪ್ರಯಾಣ ದರ ವಸೂಲು ಮಾಡುತ್ತಿದ್ದ 1000ಕ್ಕೂ ಹೆಚ್ಚು ಆಟೋಗಳ ವಿರುದ್ಧ ಆರ್ ಟಿಓ ಅಧಿಕಾರಿಗಳು ಕೇಸು ದಾಖಲಿಸಿದ್ದಾರೆ.

ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ನಿಷೇಧ ಬೆನ್ನಲ್ಲೇ ಆಟೋ ಚಾಲಕರು ಪ್ರಯಾಣಿಕರ ಬಳಿ ಮನಸೋಇಚ್ಛೆ ವಸೂಲು ಮಾಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಆರ್ ಟಿಓ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

ಕಳೆದ ಒಂದು ವಾರದಿಂದ ನಗರದ 11 ಆರ್‌ಟಿಓ ಕಚೇರಿ ವ್ಯಾಪ್ತಿಯಲ್ಲಿ 20 ತಂಡಗಳನ್ನ ರಚಿಸಿ ಸಾರಿಗೆ ಅಧಿಕಾರಿಗಳು ನಗರದಾದ್ಯಂತ ಕಾರ್ಯಚರಣೆ ಕೈಗೊಂಡಿದ್ದಾರೆ. ಈ ವೇಳೆ ಒಟ್ಟು 3,531 ಆಟೋಗಳನ್ನ ತಪಾಸಣೆ ನಡೆಸಿದ್ದು, ಪರ್ಮೀಟ್, ದುಪ್ಪಟ್ಟು ದರ ವಸೂಲಿ ಇನ್ಶೂರೆನ್ಸ್, ಡಾಕ್ಯುಮೆಂಟ್‌ಗಳಿಲ್ಲದ 1,006 ವಾಹನಗಳ ವಿರುದ್ಧ ಕೇಸ್ ದಾಖಲಿಸಿ, 233 ಆಟೋಗಳನ್ನ ಸೀಜ್  ಮಾಡಿದ್ದಾರೆ.

ಈ ಆಟೋಗಳ ಪೈಕಿ ಅತಿ ಹೆಚ್ಚು ಆಟೋಗಳು ಆ್ಯಪ್ ಆಧಾರಿತ ಸಂಚಾರ ಮಾಡುತ್ತಿದ್ದ ಆಟೋಗಳಾಗಿದ್ದು, ನಗರವ್ಯಾಪಿ ಆ್ಯಪ್ ಆಧಾರಿತ ಆಟೋಗಳ ಮೇಲೆಯೇ ಅತಿ ಹೆಚ್ಚು ದೂರಗಳಿದ್ದು, ಅದರಂತೆ ಆಯಾ ವ್ಯಾಪ್ತಿಯಲ್ಲಿ ಹೆಚ್ಚುವರಿ ದರ ಪಡೆದು ಸಂಚಾರ ಮಾಡುತ್ತಿದ್ದ ಆ್ಯಪ್ ಆಧಾರಿತ ಆಟೋಗಳಿಗೂ ಆರ್‌ಟಿಓ ಬಿಸಿ ಮುಟ್ಟಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment